ಹುಬ್ಬಳ್ಳಿ: ಮನೆ ಹಂಚಿಕೆ ಕಾರ್ಯಕ್ರಮಕ್ಕೂ ಮುನ್ನ ಅವಘಡ: ಹುಬ್ಬಳ್ಳಿಯಲ್ಲಿ ಬೃಹತ್ ಕಟೌಟ್‌ಗಳು ಕುಸಿದು ನಾಲ್ವರು ಗಾಯ

Four people were injured in the incident when huge cutouts installed on Mantoora Road in Hubballi on Saturday, following a house distribution program organized by the Slum Development Board.

ಹುಬ್ಬಳ್ಳಿ: ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಶನಿವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಒಟ್ಟು 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಈ ಅವಘಡ ಸಂಭವಿಸಿದೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಇಂದು ಬೆಳಗ್ಗೆ ಈ ಕಟೌಟ್ ಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ, ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಅವು ಕುಸಿದು ಬಿದ್ದಿವೆ. ಈ ಅವಘಡದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅದೃಷ್ಟವಶಾತ್ ದೊಡ್ಡ ಅವಘಡ ಸಂಭವಿಸಿಲ್ಲ. ಕುಸಿದುಬಿದ್ದ ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

Four people were injured in the incident when huge cutouts installed on Mantoora Road in Hubballi on Saturday, following a house distribution program organized by the Slum Development Board.