ಹಾಸನ: ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಡಿ.4-5ರಂದು ಹೆಚ್‌ಕೆಎಸ್ ಕಾಲೇಜು ಮೈದಾನದಲ್ಲಿ ಆಯೋಜನೆ

Gangadhar, Deputy Director, School Education (Pre-Degree) Department, said that the state-level ball badminton sports competition for the 2025-26 academic year will be held at the HKS College grounds in the city on December 4th and 5th.

ಹಾಸನ: ಡಿ.4 ಮತ್ತು 5 ರಂದು 2025-26ನೇ ಶೈಕ್ಷಣಿಕ ಸಾಲಿನ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾ ಸ್ಪರ್ಧೆ ನಗರದ ಎಚ್.ಕೆ.ಎಸ್ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ)ಇಲಾಖೆ ಉಪ ನಿರ್ದೇಶಕ ಗಂಗಾಧರ್ ತಿಳಿಸಿದರು.

ಕ್ರೀಡಾಕೂಟವು ಶಾಲಾ ಶಿಕ್ಷಣ (ಪದವಿ ಪೂರ್ವ)ಇಲಾಖೆ ಉಪ ನಿರ್ದೇಶಕರ ಕಚೇರಿ ಎಚ್.ಕೆ.ಎಸ್ ಪದವಿ ಪೂರ್ವ ಕಾಲೇಜು ಹಾಗೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠ್ಠಾನದ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿದರು.

ರಾಜ್ಯದ 33 ಶೈಕ್ಷಣಿಕ ಜಿಲ್ಲೆಗಳ 600 ಶ್ರೇಷ್ಠ್ಠ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದು, ಇದರ ಪೂರ್ವಭಾವಿ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಸಮಾರಂಭದ ಉದ್ಘಾಟನೆ ಡಿ.4ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿವೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಂದಾಯ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ವಹಿಸಲಿದ್ದಾರೆ. ಕ್ರೀಡಾ ಧ್ವಜಾರೋಹಣವನ್ನು ಎಚ್.ಕೆ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಹಾಗೂ ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಶ್ರೇಯಸ್ ಎಂ. ಪಟೇಲ್ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ವಿಮಲ್‌ರಾಜ್.ಜಿ, ಎಚ್.ಕೆ.ಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರವೀಣ್.ಎ ಇದ್ದರು.