ಹಾಸನ: ಗುಡ್ ಸಿಟಿಜನ್ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು ವತಿಯಿಂದ 2025-26 ನೇ ಸಾಲಿನ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗೂ 2024-25 ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭವನ್ನು ಪವನ ಪುತ್ರ ರೆಸಾರ್ಟ್ ನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿತ್ತು.
ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಕ್ಟೀವ್ ರೂರಲ್ ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಶ್ರೀಯುತ ಕಾಂತರಾಜು ಹೆಚ್. ಎಂ. ಇವರು ನಮ್ಮ ಕಾಲೇಜು ಹೆಸರಿನಂತೆಯೇ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ನಾಗರಿಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯ ಕ್ರಮಗಳನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ತಿಳಿಸಿದರು.
ಕಾರ್ಯ ಕ್ರಮದಲ್ಲಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕಾಂತರಾಜು ಎಂ. ಎನ್. ಪ್ರಾಸ್ತಾವಿಕ ನುಡಿಗಳನ್ನು ನುಡಿದರು, ಕಾರ್ಯಕ್ರಮ ದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಶ್ರೀಯುತ ವಿನೋದ್ ಗೊಬ್ಬರಗಾಲ , ಶ್ರೀಯುತ ಚಂದ್ರ ಪ್ರಭ ಮತ್ತು ಹಾಡುಗಾರರಾದ ಶ್ರೀಯುತ ಪೋಲಿಸ್ ಶಿವು ಇವರುಗಳಿಂದ ಮನೋರಂಜನೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಖಜಾಂಚಿಯವರಾದ ವಿಠಲ್,ಎಚ್.ಎಂ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಹೇಮಂತ್ ಕುಮಾರ್ ಡಿ. ಎಂ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಭಾಗವಹಿಸಿದ್ದರು.










