ಹಾಸನ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ.ಶಿವಣ್ಣ (93) ನಿಧನ

H.M. Shivanna, who was suffering from an age-related illness, had been undergoing treatment at a private hospital in Hassan for the past few days. He breathed his last this evening due to ineffective treatment.

ಹಾಸನ: ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎಚ್.ಎಂ.ಶಿವಣ್ಣ ಅವರು ಕಳೆದ ಕೆಲವು ದಿನಗಳಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ಮೂಲದ ಎಚ್.ಎಂ.ಶಿವಣ್ಣ ಅವರು ಆರೇಳು ದಶಕಗಳಿಂದ ಹಾಸನದಲ್ಲಿ ನೆಲೆಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಅವರಿಗೆ ಹಲವು ಗೌರವ ಪ್ರಶಸ್ತಿಗಳು ಲಭಿಸಿದ್ದವು.

ಪತ್ನಿ, ಇಬ್ಬರು ಗಂಡು ಹಾಗೂ ಒಬ್ಬ ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಹಾಸನದ ಶಂಕರಮಠ ರಸ್ತೆಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.