ಹಾಸನ : ಜಿಲ್ಲೆಯಲ್ಲಿ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಅರಕಲಗೂಡು ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿಯ ಮುಕ್ಕನಹಳ್ಳಿ ಗ್ರಾಮದ ಬಳಿಯ ಕೆರೆ ಏರಿ ಮೇಲೆ ಖಾಸಗಿ ಶಾಲೆಗೆ ಸೇರಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕೆರೆ ಕಡೆಗೆ ವಾಲಿ ನಿಂತಿದೆ.
🚌 ಬಸ್‌ನಲ್ಲಿ 40 ವಿದ್ಯಾರ್ಥಿಗಳು
ಶ್ರೀ ಸಿದ್ದರಾಮೇಶ್ವರ ಶಾಲೆಗೆ ಸೇರಿದ ವಾಹನವು ಬೆಳಿಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುವ ವೇಳೆ ಈ ಅಪಘಾತ ಸಂಭವಿಸಿದೆ.
ಬಸ್‌ನಲ್ಲಿ ಸುಮಾರು 40 ವಿದ್ಯಾರ್ಥಿಗಳು ಇದ್ದರು ಎಂದು ತಿಳಿದುಬಂದಿದೆ. ಮರಕ್ಕೆ ಡಿಕ್ಕಿ ಹೊಡೆದ ತಕ್ಷಣ ವಿದ್ಯಾರ್ಥಿಗಳು ಬಸ್‌ನಿಂದ ಕೆಳಗಿಳಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
⚠️ ಎಫ್‌ಸಿ ಮತ್ತು ಇನ್ಸೂರೆನ್ಸ್ ಇಲ್ಲದ ಬಸ್?
ಅಪಘಾತದ ನಂತರ ಬಸ್‌ಗೆ ಫಿಟ್ನೆಸ್ ಸರ್ಟಿಫಿಕೆಟ್ (FC) ಹಾಗೂ ಇನ್ಸೂರೆನ್ಸ್ ಇಲ್ಲದಿರುವುದು ಬೆಳಕಿಗೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
👮♂️ ಸ್ಥಳಕ್ಕೆ ಪೊಲೀಸರ ಭೇಟಿ
ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು ಘಟನಾ ಸ್ಥಳಕ್ಕೆ ಧಾವಿಸಿದರು. ಘಟನೆ ಹಳ್ಳಿಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.










