ಹಾಸನ : ಸೈಕಲ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ, ಮಾಳೇಕೊಪ್ಪಲು ಬಳಿಯ ಪ್ರೈಓವರ್ ಮೇಲೆ ಇಂದು ಬೆಳಿಗ್ಗೆ ನಡೆದಿದೆ. ಸಂಜು (16) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ.
ಹೊನ್ನಶೆಟ್ಟಿಹಳ್ಳಿ ಗ್ರಾಮದ ಗಿರೀಶ್ ಅವರ ಪುತ್ರ ಸಂಜು ಅಜ್ಜಿ ಮನೆಯಿಂದ ಕಾಲೇಜಿಗೆ ಸೈಕಲ್‌ನಲ್ಲಿ ತೆರಳುತ್ತಿದ್ದು ರಸ್ತೆ ಕ್ರಾಸ್ ಮಾಡಲು ಹೋದ ವೇಳೆ ವೇಗವಾಗಿ ಬಂದ KA03-NL-6247 ನಂಬರ್ ಕಾರು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










