ಹಾಸನ: ಐದು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ

ಹಾಸನ: ಐದು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ, ಚನ್ನಪಟ್ಟಣದಲ್ಲಿ ನಿನ್ನೆ ನಡೆದಿದೆ. ಶ್ರೀನಿಧಿ (22) ಆತ್ಮಹತ್ಯೆಗೆ ಶರಣಾದ ಯುವಕ.

ಚನ್ನಪಟ್ಟಣ ನಿವಾಸಿ ಅಂಚೆ ಕಚೇರಿಯಲ್ಲಿ ಕೆಲಸ ಮಾಡುವ ನಾಗೇಂದ್ರಪ್ರಸಾದ್.ಕೆ.ವಿ. ಹಾಗೂ ನಾಹಿತಿ ಸೌಮ್ಯಪ್ರಸಾದ್ ದಂಪತಿ ಪುತ್ರ ಶ್ರೀನಿಧಿ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಕಾಂ ಓದುತ್ತಿದ್ದರು.

ನಿನ್ನ ಸ್ನೇಹಿತನ ಬಳಿ ಬುಕ್ ಪಡೆದುಕೊಂಡು ಬರುವುದಾಗಿ ತಾಯಿ ಬಳಿ ಹೇಳಿ ಹೋಗಿದ್ದ ಶ್ರೀನಿಧಿ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಪಕ್ಕದಲ್ಲಿರುವ ಐದು ಅಂತಸ್ತಿನ ಕಟ್ಟಡ ಹತ್ತಿ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.