ಹಾಸನ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ) ಹಾಸನ ಜಿಲ್ಲಾ ಘಟಕದ ವತಿಯಿಂದ ಹಾಸನ ಜಿಲ್ಲಾ ಮಹಿಳಾ ಘಟಕ ಹಾಗೂ ಯುವ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಜನವರಿ 17, 2026ರ ಶನಿವಾರ ಬೆಳಿಗ್ಗೆ 10.30 ಗಂಟೆಗೆ ತಣ್ಣೀರುಹಳ್ಳದಲ್ಲಿರುವ ಶ್ರೀ ಶಿವಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ದೊಡ್ಡಮಠ, ಅರಕಲಗೂಡಿನ ಜಿಲ್ಲಾ ಗೌರವಾಧ್ಯಕ್ಷರು ಹಾಗೂ ಮಠಾಧೀಶರಾದ ಶ್ರೀ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ತಣ್ಣೀರುಹಳ್ಳ ಮಠದ ಮಠಾಧೀಶರಾದ ಶ್ರೀ ಶ್ರೀ ವಿಜಯಕುಮಾರ ಸ್ವಾಮಿಗಳು ಹಾಗೂ ಜವೇನಹಳ್ಳಿ ಮಠದ ಮಠಾಧೀಶರಾದ ಶ್ರೀ ಶ್ರೀ ಸಂಗಮೇಶ್ವರ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಸಮಿತಿ ಸದಸ್ಯರಾದ ಶ್ರೀಮತಿ ಚಂದ್ರಕಲಾ ಉದ್ಘಾಟಿಸಲಿದ್ದು, ಮಹಾಸಭಾ ಹಾಸನ ಜಿಲ್ಲಾ ಅಧ್ಯಕ್ಷರಾದ ಶ್ರೀ ಎನ್. ಪರಮೇಶ್ (ನವಿಲೆ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸಮಿತಿ ಸದಸ್ಯ ಶ್ರೀ ಎಸ್.ಹೆಚ್. ರಾಜಶೇಖರ್, ರಾಜ್ಯ ಯುವ ಘಟಕದ ಅಧ್ಯಕ್ಷ ಶ್ರೀ ಮನೋಹರ್ ಜಿ. ಅಣ್ಣಗೆರೆ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಮುತ್ತಾಂಭ, ರಾಜ್ಯ ಯುವ ಘಟಕದ ಕಾರ್ಯದರ್ಶಿ ಶ್ರೀ ವಿಕ್ರಂತೌಲ, ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕವಿತ, ರಾಜ್ಯ ಘಟಕದ ನಿರ್ದೇಶಕ ಶ್ರೀ ಶಿವಕುಮಾರ್ ಹೆಚ್.ಪಿ.,
ರಾಜ್ಯ ಮಹಿಳಾ ಘಟಕದ ನಿರ್ದೇಶಕಿ ಶ್ರೀಮತಿ ನಾಗರತ್ನ, ಹಾಸನ ಜಿಲ್ಲಾ ಯುವ ಘಟಕದ ನಿಕಟಪೂರ್ವ ಅಧ್ಯಕ್ಷ ಶ್ರೀ ಅನೂಪ್, ಶ್ರೀಮತಿ ಸುಧಾ ವಿನೋದ್, ರಾಜ್ಯ ಮಹಿಳಾ ಘಟಕದ ನಿರ್ದೇಶಕಿ ಶ್ರೀಮತಿ ಯಶೋಧ ಹಿರೇವಾರೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಇದಲ್ಲದೆ, ಹಾಸನ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಹಾಗೂ ಯುವ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಜಿಲ್ಲೆಯಿಂದ ರಾಜ್ಯ ಘಟಕದ ವಿವಿಧ ವಿಭಾಗಗಳಿಗೆ ನೇಮಕಗೊಂಡ ನಾಮನಿರ್ದೇಶಿತ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.










