Hassan:📰 ನಿರ್ಜನ ಪ್ರದೇಶದಲ್ಲಿ ಶವ ಪತ್ತೆ: ಯುಗಾದಿ‌ ಜೂಜಾಟದಲ್ಲಿ ಬಿತ್ತೇ ಹೆಣ?

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತಾವರೆಹಳ್ಳಿಯಲ್ಲಿ 34 ವರ್ಷದ ಪ್ರವೀಣ್ ಬರ್ಬರವಾಗಿ ಹತ್ಯೆಗೀಡಾಗಿದ್ದು, ಹಣದ ವಿಚಾರಕ್ಕೆ ಕೊಲೆ ಶಂಕೆ ವ್ಯಕ್ತವಾಗಿದೆ.

Hassan ಹಾಸನ | ಕನ್ನಡಪೋಸ್ಟ್ ವರದಿ

ಹಾಸನ (kannadapost.com): ಅರಸೀಕೆರೆ ತಾಲೂಕಿನ ತಾವರೆಹಳ್ಳಿ ಗ್ರಾಮದ ಹಳ್ಳದಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿಯನ್ನು ಅರಕೆರೆ ಗ್ರಾಮದ ಪ್ರವೀಣ್ (34) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದ್ದು, ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಇಸ್ಪಿಟ್ (ಜೂಜಾಟ) ಆಡುತ್ತಿದ್ದ ವೇಳೆ ಹಣದ ವಿಚಾರಕ್ಕೆ ಉಂಟಾದ ಜಗಳವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ತನಿಖೆಯಿಂದಲೇ ತಿಳಿಯಬೇಕಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಪ್ರಕರಣ ಜಾವಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.