hassan ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಬಳಿ ಸ್ವಿಫ್ಟ್ ಕಾರು ಹೇಮಾವತಿ ನಾಲೆಗೆ ಬಿದ್ದ ಪರಿಣಾಮ ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ. ಧರ್ಮಸ್ಥಳದಿಂದ ವಾಪಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಹಾಸನ, ಏಪ್ರಿಲ್ 29,2026(www.kannadapost.com): ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಪರಿಣಾಮ ತಾಯಿ ಮತ್ತು ಮಗು ಸಾವನ್ನಪ್ಪಿದ್ದಾರೆ.
ಮೃತರನ್ನು ಪ್ರಿಯಾಂಕ (30) ಹಾಗೂ ಒಂದುವರೆ ವರ್ಷದ ವೈಭವ್ ಎಂದು ಗುರುತಿಸಲಾಗಿದೆ. ಇವರು ದೇವನಹಳ್ಳಿ ಮೂಲದವರು. ಧರ್ಮಸ್ಥಳಕ್ಕೆ ಭೇಟಿ ನೀಡಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿ ಇದ್ದ ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.










