Hassan ಹಾಸನ | ಕನ್ನಡಪೋಸ್ಟ್ ವರದಿ
ಚನ್ನರಾಯಪಟ್ಟಣ: ತಾಲೂಕಿನ ಅಣ್ಣೇನಹಳ್ಳಿ ಗ್ರಾಮದಲ್ಲಿ ಎಳನೀರು ಕೀಳಲು ತೆಂಗಿನಮರ ಹತ್ತಿದ್ದ ಯುವಕ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಮೃತ ಯುವಕನನ್ನು ಅಭಿಷೇಕ್ (23) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಅಭಿಷೇಕ್ ಎಳನೀರು ಕೀಳಲು ತೆಂಗಿನಮರಕ್ಕೆ ಹತ್ತಿದ್ದ ವೇಳೆ ಏಕಾಏಕಿ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ.
ಭಾರೀ ಎತ್ತರದಿಂದ ಕೆಳಗೆ ಬಿದ್ದ ಪರಿಣಾಮ ಅಭಿಷೇಕ್ ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಘಟನೆ ತಿಳಿದ ಕೂಡಲೇ ಸ್ಥಳೀಯರು ಹಾಗೂ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.










