ಹಾಸನ : ನಗರದ ಓಂ ಯೋಗ ಶಿಕ್ಷಣ ಶಾಲೆಯಲ್ಲಿ ಬುಧವಾರ, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತರಬೇತುದಾರ ಜೆ.ಐ. ನಿರಂಜನ್ ರಾಜ್ ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ 60 ವರ್ಷ ತುಂಬಿದ ಯೋಗ ಪಟುಗಳಾದ ಶ್ರೀ ಶರತ್ ಬಾಬು, ಶ್ರೀ ಸತೀಶ್ ಮತ್ತು ಶ್ರೀ ಚಂದ್ರಶೇಖರ್ ಅವರನ್ನೂ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗಗುರು ಶ್ರೀ ಮನೋಹರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎ.ವಿ.ಕೆ. ಕಾಲೇಜಿನ ಪ್ರಾಂಶುಪಾಲ ಶ್ರೀ ಯತೀಶ್ವರ್, ಹಾಸನ ಜಿಲ್ಲಾ ಯೋಗ ಸಂಸ್ಥೆಯ ಅಧ್ಯಕ್ಷ ಶ್ರೀ ಕೃಷ್ಣಪ್ಪ, ಮತ್ತು ರಾಷ್ಟ್ರೀಯ ಯೋಗ ಪಟು ನಾಗರಾಜ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಓಂ ಯೋಗ ಶಿಕ್ಷಣ ಶಾಲೆಯ ಮಾಜಿ ಅಧ್ಯಕ್ಷರಾದ ದಿವಂಗತ ಜ.ಹೋ. ನಾರಾಯಣಸ್ವಾಮಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸ್ಮರಿಸಲಾಯಿತು.










