11.8 C
Munich
Home News Politics Hassan: ನಿಖಿಲ್‌ಕುಮಾರಸ್ವಾಮಿ ಧರ್ಮಸ್ಥಳ ಸತ್ಯ ಯಾತ್ರೆ ಆರಂಭ: ಕ್ಷೇತ್ರದ ವಿರುದ್ಧ ಸಂಘಟಿತ ಷಡ್ಯಂತ್ರ ನಡೆಯುತ್ತಿದೆ

Hassan: ನಿಖಿಲ್‌ಕುಮಾರಸ್ವಾಮಿ ಧರ್ಮಸ್ಥಳ ಸತ್ಯ ಯಾತ್ರೆ ಆರಂಭ: ಕ್ಷೇತ್ರದ ವಿರುದ್ಧ ಸಂಘಟಿತ ಷಡ್ಯಂತ್ರ ನಡೆಯುತ್ತಿದೆ

ಹಾಸನ Hassan: ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಸತ್ಯ ಯಾತ್ರೆ ಆರಂಭಿಸಿದ್ದಾರೆ. ಇಂದು ಧರ್ಮಸ್ಥಳದಲ್ಲಿ ಮಂಜುನಾಥಸ್ವಾಮಿ ಹಾಗೂ ಅಣ್ಣಪ್ಪಸ್ವಾಮಿ ದರ್ಶನ ಪಡೆದು ಧರ್ಮಾಧಿಕಾರಿಗಳಿಗೆ ನೈತಿಕ ಬೆಂಬಲ ಸೂಚಿಸುವುದಾಗಿ ಅವರು ಘೋಷಿಸಿದ್ದಾರೆ.

ನಿಖಿಲ್‌ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ –

  • ಕಳೆದ ಹಲವಾರು ದಿನಗಳಿಂದ ಧರ್ಮಸ್ಥಳದ ಆವರಣದಲ್ಲಿ ಅಪಪ್ರಚಾರಗಳು, ಅನುಮಾನ ಎಬ್ಬಿಸುವಂತಹ ಸಂಘಟಿತ ಷಡ್ಯಂತ್ರಗಳು ನಡೆಯುತ್ತಿವೆ ಎಂದು ಆರೋಪಿಸಿದರು.
  • “ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಸಂಚು ನಡೆಯುತ್ತಿದೆ, ಇದಕ್ಕೆ ಸಮಾಜಘಾತುಕ ಶಕ್ತಿಗಳು ಕೈ ಹಾಕಿವೆ. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು” ಎಂದರು.
  • “ಮಂಜುನಾಥಸ್ವಾಮಿ ವಿಚಾರದಲ್ಲಿ ರಾಜಕೀಯ ಬೆರೆಸುವ ಪ್ರಶ್ನೆಯೇ ಇಲ್ಲ. ಇದು ಪಕ್ಷಾತೀತ ಯಾತ್ರೆ. ಭಕ್ತಾಧಿಗಳು ಸ್ವಇಚ್ಛೆಯಿಂದ ಪಾಲ್ಗೊಂಡಿದ್ದಾರೆ” ಎಂದು ಅವರು ಹೇಳಿದರು.

“ನಾನು ಬಾಲ್ಯದಿಂದಲೂ ಮಂಜುನಾಥಸ್ವಾಮಿ ಪರಮಭಕ್ತ. ಪ್ರತಿ ವರ್ಷ ಧರ್ಮಸ್ಥಳಕ್ಕೆ ಬಂದು ದರ್ಶನ ಪಡೆಯುತ್ತೇನೆ. ಇಂದು ಧರ್ಮಾಧಿಕಾರಿಗಳಿಗೆ ನೈತಿಕ ಬೆಂಬಲ ಸೂಚಿಸಲು ಸತ್ಯಯಾತ್ರೆ ಹೊರಟಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಹುನ್ನಾರವನ್ನು ಖಂಡಿಸಿದ ಅವರು, “ಇದರಲ್ಲಿ ಯೂಟ್ಯೂಬರ್‌ಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಇದರ ಹಿಂದೆ ದೊಡ್ಡ ಮಟ್ಟದ ಸಂಘಟನೆ ಹಾಗೂ ಅಂತಾರಾಷ್ಟ್ರೀಯ ಹಣಕಾಸು ಇದೆ. ಆದ್ದರಿಂದ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು” ಎಂದು ಒತ್ತಾಯಿಸಿದರು.

error: Content is protected !!