5.8 C
Munich
Home ಜಿಲ್ಲೆ ಚನ್ನರಾಯಪಟ್ಟಣ: ರಾಂಗ್ ಸೈಡ್ ನಲ್ಲಿ ಬಂದ ಸ್ಕೂಟರ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಬೈಕ್...

ಚನ್ನರಾಯಪಟ್ಟಣ: ರಾಂಗ್ ಸೈಡ್ ನಲ್ಲಿ ಬಂದ ಸ್ಕೂಟರ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಬೈಕ್ ಸವಾರ ದುರಂತ ಸಾವು

Hassan, November 12: A young biker died on the spot and another person was seriously injured in a road accident that occurred in Channarayapatna town.

ಹಾಸನ, ನವೆಂಬರ್ 12:ಚನ್ನರಾಯಪಟ್ಟಣ ಪಟ್ಟಣದಲ್ಲಿ ಸಂಭವಿಸಿದ ರಸ್ತೆ ದುರಂತದಲ್ಲಿ ಬೈಕ್ ಸವಾರ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ.

ಪಟ್ಟಣದ 40 ಅಡಿ ಆಂಜನೇಯ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಸ್ಕೂಟಿಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ದಂಪತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಬೈಕ್ ಸ್ಕಿಡ್ ಆಗಿ ಯುವಕರು ರಸ್ತೆ ಬಿದ್ದರು.

ಈ ಘಟನೆಯಲ್ಲಿ ಚಂದು (22) ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಹಿಂಬದಿ ಕುಳಿತಿದ್ದ ಮತ್ತೋರ್ವ ಯುವಕ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಲಾಗಿದೆ.


error: Content is protected !!