ಹಾಸನ: ಶ್ರೀ ದೊಡ್ಡನಳ್ಳಿ ಚೌಡೇಶ್ವರಿ ಅಮ್ಮನವರ 6ನೇ ವರ್ಷದ ಜಾತ್ರಾ ಮಹೋತ್ಸವ ದಿನಾಂಕ 25, 26 ಮತ್ತು 27 ರಂದು ಮೂರು ದಿನಗಳ ಕಾಲ ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ನಡೆಯಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಕಳಸ ಪೂಜೆ, ಶ್ರೀ ಚೌಡೇಶ್ವರಿ ಅಮ್ಮನವರ ರಥೋತ್ಸವ, ಹೋಮ ಹಾಗೂ ಮಹಾಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಸುತ್ತಮುತ್ತಲಿನ ಹಲವು ಹಳ್ಳಿಗಳ ಶಕ್ತಿ ದೇವತೆಯಾದ ಶ್ರೀ ಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.
ಮೂರು ದಿನಗಳ ಕಾಲ ಭಕ್ತರಿಗಾಗಿ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದ್ದು, ಭಕ್ತರು ಶ್ರದ್ಧಾಭಕ್ತಿಯಿಂದ ಪ್ರಸಾದ ಸ್ವೀಕರಿಸಿದರು. ಜಾತ್ರಾ ಮಹೋತ್ಸವದ ಯಶಸ್ವಿ ಆಯೋಜನೆಗೆ ಸಹಕರಿಸಿದ ಎಲ್ಲಾ ಭಕ್ತರು, ದಾನಿಗಳು ಹಾಗೂ ಸೇವಕರಿಗೆ ಶ್ರೀ ಚೌಡೇಶ್ವರಿ ಅಮ್ಮನವರ ಜಾತ್ರಾ ಸಮಿತಿ ಮತ್ತು ದೊಡ್ಡನಳ್ಳಿ ಗ್ರಾಮಸ್ಥರು ಕೃತಜ್ಞತೆ ವ್ಯಕ್ತಪಡಿಸಿದರು.










