ಹಾಸನ : ಮದುವೆಗೆ ಬಂದಿದ್ದ ಮಹಿಳೆ ನಿಗೂಢ ರೀತಿಯಲ್ಲಿ ಕಣ್ಮರೆ…!

ಕೆರೆಯ ಬಳಿ ಸಿಕ್ತು ಆಕೆಯ ಒಳಉಡುಪು, ಚಪ್ಪಲಿ, ಬ್ಯಾಗ್..!

ಹಾಸನ: ಹಾಸನ ತಾಲ್ಲೂಕಿನ ಕಲ್ಕೆರೆ ಗ್ರಾಮದ ಸಮೀಪದ ಬಳಿ ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ಕಾಣೆಯಾಗಿರುವ ಘಟನೆ ಆತಂಕ ಮೂಡಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿ ಪ್ರಿಯಾಂಕ (29) ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಆಗಮಿಸಿದ್ದರು.

ಫೆಬ್ರವರಿ 12ರ ರಾತ್ರಿ ಸುಮಾರು 7.30ರ ವೇಳೆ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದ ಅವರು, ರಾತ್ರಿ 8 ಗಂಟೆ ಸುಮಾರಿಗೆ ಬೇಲೂರು ಬಸ್ ನಿಲ್ದಾಣದಿಂದ ನಿಗೂಢವಾಗಿ ಕಣ್ಮರೆಯಾಗಿದ್ದಾರೆ. ಬಸ್ ಏರಿದ ಬಳಿಕ ಅವರ ಮೊಬೈಲ್ ದೂರವಾಣಿ ಸಂಪರ್ಕ ಸ್ಥಗಿತಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಿಯಾಂಕ ಮೈಮೇಲೆ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಧರಿಸಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಚಿನ್ನಾಭರಣ ಸಮೇತ ಅವರು ಕಾಣೆಯಾಗಿರುವುದರಿಂದ ದರೋಡೆ ಉದ್ದೇಶದಿಂದ ಅಪರಾಧ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕಲ್ಕೆರೆ ಬಳಿ ಮಹಿಳೆಯ ಒಳಉಡುಪು, ಚಪ್ಪಲಿ, ವ್ಯಾನಿಟಿ ಬ್ಯಾಗ್ ಹಾಗೂ ಟಾಪ್ ಪತ್ತೆಯಾಗಿದ್ದು ಪ್ರಕರಣಕ್ಕೆ ಮತ್ತಷ್ಟು ಗಂಭೀರ ತಿರುವು ಸಿಕ್ಕಿದೆ. ಮಹಿಳೆಯ ಮೇಲಿದ್ದ ಚಿನ್ನಾಭರಣಕ್ಕಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದೆಂಬ ಆರೋಪ ಕೇಳಿಬರುತ್ತಿದೆ.

ಮಾಹಿತಿ ಆಧರಿಸಿ ಕುಟುಂಬ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರಕರಣವು ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಸ್ಥಳಕ್ಕೆ ಪೊಲೀಸರು, ಸೂಕೊ ಟೀಂ ಹಾಗೂ ಎಸ್ಪಿ ಶುಭನ್ವಿತಾ ಭೇಟಿ ಪರಿಶೀಲನೆ ಮಾಡುತ್ತಿದ್ದಾರೆ.