ಹಾಸನ: ತಾಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣಪತಿ ಮೆರವಣಿಗೆ ಮೇಲೆ ನುಗ್ಗಿದ ಲಾರಿಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಅವರಲ್ಲಿ ಐವರು ಗ್ರಾಮದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.
ಮೃತರ ವಿವರ
1. ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ
2. ರಾಜೇಶ (17) ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು
3. ಈಶ್ವರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲ್ಲೂಕು
4. ಗೋಕುಲ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು
5. ಕುಮಾರ (25 ) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
6. ಪ್ರವೀಣ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
7. ಮಿಥುನ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ.
8. ಸುರೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ
9. ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕು
ಶವಗಳನ್ನು ಹಿಮ್ಸ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಇಂದು ಮರಣೋತ್ತರ ಪರೀಕ್ಷೆ ನಡೆಯಲಿದೆ.










