12.7 C
Munich
Home News ಹಾಸನ: ಹಾಸನ ನಗರ ಪಾಲಿಕೆಗೆ ಆಡಳಿತಾಧಿಕಾರಿ ನೇಮಕ

ಹಾಸನ: ಹಾಸನ ನಗರ ಪಾಲಿಕೆಗೆ ಆಡಳಿತಾಧಿಕಾರಿ ನೇಮಕ

ಹಾಸನ: ನಗರಸಭೆಯಿಂದ ಹೊಸದಾಗಿ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿರುವ ಹಾಸನ ಮಹಾನಗರ ಪಾಲಿಕೆಯ ಚುನಾಯಿತ ಆಡಳಿತ ಮಂಡಳಿಯ ಅವಧಿ ಮುಕ್ತಾಯ ಆಗಿರುವುದರಿಂದ ಮುಂದಿನ ಆಡಳಿತ ನಿರ್ವಹಣೆಗಾಗಿ ನೂತನ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅದರಂತೆ ಮೈಸೂರು ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ್ ಅವರು ಹಾಸನ ಮಹಾನಗರ ಪಾಲಿಕೆಗೆ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಪಾಲಿಕೆಯ ಚುನಾಯಿತ ಆಡಳಿತ ಮಂಡಳಿ ಅವಧಿ ೨೦೨೫ ಅ.೨೮ ರಂದು ಕೊನೆಗೊಂಡಿದೆ. ಹಾಗಾಗಿ ಮುಂದಿನ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಹೊಸ ಚುನಾಯಿತ ಆಡಳಿತ ಮಂಡಳಿಯು ಅಸ್ವಿತ್ವಕ್ಕೆ ಬರುವವರೆಗೂ ಕಾರ್ಯ ನಿರ್ವಹಣೆಗಾಗಿ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ.

ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ ೧೯೭೬ ರ ನಿಯಮ-೫೦೯ ರನ್ವಯ ಪ್ರದತ್ತವಾಗಿರುವ ಅಧಿಕಾರದನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಅ.೨೯ ರಿಂದಲೇ ಮುಂದಿನ ಆದೇಶದವರೆಗೆ ನಿತೇಶ್ ಪಾಟೀಲ್ ಅವರು ಹಾಸನ ಮಹಾ ನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ತಿಳಿಸಿದ್ದಾರೆ.

error: Content is protected !!