ಸಕಲೇಶಪುರ: ಹುಲ್ಲಿನ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಸಕಲೇಶಪುರ ತಾಲೂಕಿನ ಕಾಕನ ಮನೆ ಸಮೀಪ ರಸ್ತೆಯಲ್ಲಿ ಹುಲ್ಲಿನ ಹೊರೆ ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ.
ಹುಲ್ಲಿನ ಹೊರೆ ಲೋಡ್ ತುಂಬಿಕೊಂಡು ಸಾಗುತ್ತಿದ್ದ ಲಾರಿ, ರಸ್ತೆಯ ಮೇಲಿನಿಂದ ಹಾದುಹೋಗಿದ್ದ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ಏಕಾಏಕಿ ಬೆಂಕಿ ಕಾಣಿಸಿಕೊಂಡಿತು. ಲಾರಿಯಿಂದ ಹೊಗೆ ಮತ್ತು ಬೆಂಕಿ ಕಾಣುತ್ತಿದ್ದಂತೆಯೇ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.
ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಸಮಯೋಚಿತ ಕಾರ್ಯಾಚರಣೆಯಿಂದ ಲಾರಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗುವುದನ್ನು ತಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಲಾರಿಯಲ್ಲಿ ತುಂಬಿದ್ದ ಹುಲ್ಲಿನ ಹೊರೆಗೆ ಭಾಗಶಃ ಹಾನಿಯಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
hay truck caught fire after an electric wire touched it. An incident occurred when a truck carrying a load of hay caught fire after an electric wire touched it on the road near Kaka’s house in Sakleshpur taluk.










