ಹೊಳೆನರಸೀಪುರ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿ.ಎಸ್.ಐ.ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಶಿವಲಿಂಗಪ್ಪ (೫೯) ಹೃದಯಾಘಾತದಿಂದ ನಿಧನರಾದರು. ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿಯ ಮಲ್ಲರಾಜಪಟ್ಟಣದ ಅವರ ಸ್ವಗೃಹದಲ್ಲಿ ಹಠಾತ್ ಹೃದಯಾಘಾತದಿಂದ ಇಂದು ನಿಧನರಾದರು.
ದಕ್ಷ ಅಧಿಕಾರಿಯಾಗಿ ಹೆಸರು ಮಾಡಿದ್ದ ಶಿವಲಿಂಗಪ್ಪ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ.
ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಮತ್ತು ಬಂಧು ಮಿತ್ರರು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.










