1.4 C
Munich
Home News ಚನ್ನರಾಯಪಟ್ಟಣ:  ಬಿಜೆಪಿ ಘಟಕದಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬ ಆಚರಣೆ

ಚನ್ನರಾಯಪಟ್ಟಣ:  ಬಿಜೆಪಿ ಘಟಕದಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬ ಆಚರಣೆ

ಚನ್ನರಾಯಪಟ್ಟಣ: ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ75ನೇ ಹುಟ್ಟಹಬ್ಬ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಪಕ್ಷವು ಮುಖಂಡ ಸಿ.ಆರ್.ಚಿದಾನಂದ್ ನೇತೃತ್ವದಲ್ಲಿ ಮೋದಿಯವರ 75ನೇ ಹುಟ್ಟಹಬ್ಬದ ಸಲುವಾಗಿ ದೇವಾಲಯಗಳಲ್ಲಿ ಪೂಜೆ, ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ, ಮತ್ತು ಸಾರ್ವಜನಿಕರಿಗೆ ಅನ್ನದಾನ ನಡೆಸಲಾಯಿತ್ತು.

ದೇಶಕ್ಕೆ ಮೂರನೇ ಅವಧಿಗೆ ಪ್ರಧಾನಿಯಾಗಿ ದೇಶವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುತ್ತಿರುವ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟುಹಬ್ಬವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತಿದೆ. ಆದೇ ರೀತಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿಯೂ ಮೋದಿಯವರ ಹುಟ್ಟಹಬ್ಬವನ್ನು ಬಿಜೆಪಿ ಪಕ್ಷ ಮತ್ತು ಅವರ ಅಭಿಮಾನಿಗಳು ಆಚರಣೆ ಮಾಡಿದ್ದು, ಬಿಜೆಪಿ ಮುಖಂಡ ಸಿ.ಆರ್.ಚಿದಾನಂದ್ ನೇತೃತ್ವದಲ್ಲಿ ನೂರಾರು ಪಕ್ಷದ ಕಾರ್ಯಕರ್ತರು, ಪಟ್ಟಣದ40ಅಡಿ ಅಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೋದಿಯವರ ಹೆಸರಿನಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲಿ ಆಗಮಿಸಿದ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು, ಸಾರ್ವಜನಿಕರಿಗೆ ಬೆಳಗ್ಗಿನ ಫಲಹಾರ ವಿತರಿಸಲಾಯಿತ್ತು.

ನಂತರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿರುವ ನೂರಕ್ಕೂ ಹೆಚ್ಚು ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿ ನಂತರ ಪಟ್ಟಣದ ಗಣಪತಿ ಪೆಂಡಾಲಿನಲ್ಲಿ ಗಣೇಶ ಮೂರ್ತಿಗೆ ಮಧ್ಯಾಹ್ನದ ಪೂಜೆ ಸಲ್ಲಿಸಿ ಮೋದಿಯವರ ಹೆಸರಿನಲ್ಲಿ ಸಂಕಲ್ಪ ನೆರವೇರಿಸಿ ನೆರೆದಿದ್ದ ಸಾವಿರಾರು ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸುವ ಮೂಲಕ ಅರ್ಥಪೂರ್ಣ ಹುಟ್ಟಹಬ್ಬ ಆಚರಣೆಯನ್ನು ಮಾಡಲಾಯಿತ್ತು.
.

error: Content is protected !!