ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಆಸಕ್ತಿ ಇಲ್ಲ- ಕೇಂದ್ರ ಸಚಿವ ವಿ. ಸೋಮಣ್ಣ ಸ್ಪಷ್ಟನೆ

Just as the power-sharing battle and factional clashes are raging in the state Congress, a tug-of-war is underway within the BJP camp over the post of state president.

ನವದೆಹಲಿ: ರಾಜ್ಯ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆ ಸಮರ, ಬಣ ಬಡಿದಾಟಗಳು ಗರಿಗೆದರಿರುವಂತೆ ಬಿಜೆಪಿ ಪಾಳಯದಲ್ಲೂ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಹಗ್ಗ ಜಗ್ಗಾಟ ನಡೆಯುತ್ತಿದೆ.

ತೆರೆಮರೆಯಲ್ಲಿ ಮತ್ತೆ ಬಿಜೆಪಿ ರೆಬೆಲ್​ ನಾಯಕರು ತಮ್ಮ ತಂತ್ರಗಾರಿಕೆ ಶುರುಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಬಂಡಾಯ ನಾಯಕರೊಂದಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಅವರೂ ಕೂಡ ಲಾಬಿ ನಡೆಸುತ್ತಿದ್ದಾರೆಂದ ಮಾತುಗಳು ಕೇಳಿ ಬಂದಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸೋಮಣ್ಣ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ನನಗೆ ಯಾವುದೇ ಆಸಕ್ತಿಯಿಲ್ಲ. ಪಕ್ಷದ ಹೈಕಮಾಂಡ್ ಈಗಾಗಲೇ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿದೆ. ಈ ಗೌರವದಿಂದ ತೃಪ್ತನಾಗಿದ್ದೇನೆಂದು ಹೇಳಿದ್ದಾರೆ.

ಕೋಲಾರ ಸಂಸದ ಮಲ್ಲೇಶ್ ಬಾಬು ಅವರ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಾನು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಈ ಕುರಿತು ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯ ಮೇರೆಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ತುಮಕೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇನೆ. ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಬಿಜೆಪಿ ಈಗಾಗಲೇ ಗೌರವ ನೀಡಿದೆ ಎಂದು ತಿಳಿಸಿದರು.

Just as the power-sharing battle and factional clashes are raging in the state Congress, a tug-of-war is underway within the BJP camp over the post of state president.