ಬೆಂಗಳೂರು : SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ

ಬೆಂಗಳೂರು : ರಾಜ್ಯದಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು.

ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು. ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು

ಮಾರ್ಚ್ 18ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 8,12,855 ಮಂದಿ ಹೊಸಬರು, 62,845 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 27,189 ಮಂದಿ ಖಾಸಗಿ ಅಭ್ಯರ್ಥಿಗಳು ಸೇರಿದ್ದಾರೆ. ರಾಜ್ಯಾದ್ಯಂತ 2,871 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಭದ್ರತೆ ಹಾಗೂ ಪಾರದರ್ಶಕತೆಗೆ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 23ರವರೆಗೆ ನಡೆಯಲಿದ್ದು, ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವಿತೀಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ ಹಾಗೂ ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ 7.10 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಫೆಬ್ರವರಿ 28ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,46,801 ಮಂದಿ ಹೊಸಬರು, 50,540 ಮಂದಿ ಪುನರಾವರ್ತಿತರು ಹಾಗೂ 13,022 ಮಂದಿ ಖಾಸಗಿ ಅಭ್ಯರ್ಥಿಗಳು ಸೇರಿದ್ದಾರೆ. ರಾಜ್ಯದಾದ್ಯಂತ 1,217 ಪಿಯುಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ

ಫೆಬ್ರವರಿ 28 – ಕನ್ನಡ, ಅರೇಬಿಕ್

ಮಾರ್ಚ್ 2 – ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಶ್ಯಾಸ್ತ್ರ

ಮಾರ್ಚ್ 3 – ಇಂಗ್ಲಿಷ್

ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 5 – ಇತಿಹಾಸ

ಮಾರ್ಚ್ 6 – ಭೌತಶಾಸ್ತ್ರ

ಮಾರ್ಚ್ 7 – ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ

ಮಾರ್ಚ್ 9 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ

ಮಾರ್ಚ್ 10 – ಅರ್ಥಶಾಸ್ತ್ರ

ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 12 – ಹಿಂದಿ

ಮಾರ್ಚ್ 13 – ರಾಜ್ಯಶಾಸ್ತ್ರ

ಮಾರ್ಚ್ 14 – ಲೆಕ್ಕಶಾಸ್ತ್ರ, ಗಣಿತ

ಮಾರ್ಚ್ 16 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 17 – ಹಿಂದುಸ್ತಾನಿ ಸಂಗೀತ, ರೀಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ ಪರೀಕ್ಷೆಗಳ ಸುಗಮ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಗೆ ಹಾಜರಾಗುವಂತೆ ಸಚಿವರು ಕರೆ ನೀಡಿದ್ದಾರೆ.