ಹಾಸನ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಯಾಗಿ ಹಾಸನದ ಹಿರಿಯ ಪತ್ರಕರ್ತ ಹೆಚ್.ಬಿ. ಮದನಗೌಡ ಅವರನ್ನು ನೇಮಕ ಮಾಡಿ ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಆದೇಶಿಸಿದ್ದಾರೆ.
ಹೆಚ್.ಬಿ. ಮದನಗೌಡ ಅವರು ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಕಲೆ ರಕ್ಷಣೆ, ಕನ್ನಡ-ಕನ್ನಡಿಗ-ಕರ್ನಾಟಕದ ಹಿತ ರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಕನ್ನಡ ಸಾಹಿತ್ಯ ಪರಿಷತ್ ಪರಿಷತ್ ಅನುಷ್ಠಾನಗೊಳಿಸುತ್ತಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಸಾಹಿತ್ಯಿಕ, ಸಾಂಸ್ಕ್ರತಿಕ ಚಿಂತಕರಾದ ಹೆಚ್.ಬಿ. ಮದನ್ ಗೌಡ ಅವರನ್ನು ಕಸಾಪ ಗೌರವ ಕಾರ್ಯದರ್ಶಿಯಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಡಾ. ಮಹೇಶ್ ಜೋಶಿ ತಿಳಿಸಿದ್ದಾರೆ.










