ಹಾಸನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ‘ನನ್ನ ಮತ ನನ್ನ ಹಕ್ಕು’ ಎಂಬ ವಿಷಯದ ಕುರಿತು ಆಯೋಜಿಸಲಾದ ಭಾಷಣ ಸ್ಪರ್ಧೆಯಲ್ಲಿ ನಗರದ ಎಂ. ಕೃಷ್ಣ ಕಾನೂನು ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಕೀರ್ತಿರಾಜ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಹಾಸನದ ಅಂಬೇಡ್ಕರ್ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸದ ಶ್ರೇಯಸ್ ಪಟೇಲ್ ಬಹುಮಾನ ವಿತರಿಸಿದರು. ಎಂ. ಕೃಷ್ಣ ಕಾನೂನು ಮಹಾವಿದ್ಯಾಲಯದ ಮಂಡಳಿ ಹಾಗೂ ಪ್ರಾಂಶುಪಾಲರು ಕೀರ್ತಿರಾಜ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ.










