ಹಾಸನಾಂಬ ದರ್ಶನಕ್ಕೆ ಇಂದು ಬರಲಿದ್ದಾರೆ ಡಿಸಿಎಂ, ನಾಳೆಗೆ ಸಿಎಂ

large number of dignitaries are flocking to have darshan of the goddess of power, Hassanamba. Deputy Chief Minister D.K. Shivakumar will arrive today and Chief Minister Siddaramaiah tomorrow.

ಹಾಸನ: ಶಕ್ತಿ ದೇವತೆ ಹಾಸನಾಂಬ ದರ್ಶನಕ್ಕೆ ಗಣ್ಯರ ದಂಡು ಹರಿದು ಬರುತ್ತಿದ್ದು ಇವತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ.

ಸಂಜೆ 5 ಗಂಟೆಗೆ ರಸ್ತೆ ಮಾರ್ಗವಾಗಿ ಬರಲಿರುವ ಡಿ.ಕೆ. ಶಿವಕುಮಾರ್ ಹಾಸನಾಂಬ ಹಾಗೂ ಸಿದ್ದೇಶ್ವರಸ್ವಾಮಿ ದರ್ಶನ ಪಡೆದು ಸಂಜೆ 7 ಗಂಟೆಗೆ ವಾಪಸ್ಸಾಗಲಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಳಿಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.

ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಆಗಮನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.