12.7 C
Munich
Home News ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

ಹಾಸನ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುನಲ್ಲಿ ದಿನಾಂಕ 12-08-2025 ರಂದು ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಸಮಾಜಶಾಸ್ತ್ರ ವಿಭಾಗ, IQAC ಸಹಯೋಗದೊಂದಿಗೆ ಗ್ರಂಥಾಲಯ ಪಿತಾಮಹ ಪದಶ್ರೀ ಡಾ.ಎಸ್.ಆರ್ ರಂಗನಾಥನ್‌ರವರ 133ನೇ ಜನ್ಮ ದಿನಾಚರಣೆ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಬಾಷಾ ಅವರು ಮಾತನಾಡಿ “ವಿದ್ಯಾರ್ಥಿಗಳು ಓದುವುದನ್ನು ಹವ್ಯಾಸ ಮಾಡಿಕೊಳ್ಳಲು ಓದಿಗೆ ಪೂರಕವಾದ ವಾತಾವರಣ ಸೃಷ್ಟಿ ಮಾಡಿಕೊಳ್ಳಬೇಕಾಗುತ್ತದೆ, ಪ್ರತಿ ಪುಟವನ್ನು ಓದಿದ ನಂತರ ಟಿಪ್ಪಣಿ ಮಾಡಿಕೊಳ್ಳುವ ಅಭ್ಯಾಸ ಮಾಡಿಕೊಳ್ಳಿ ಹಾಗೂ ಓದಿಗೆ ಮೀಸಲಾದ ಸಮಯದಲ್ಲಿ ಮೊಬೈಲ್ ಪೋನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕೆಂದು ಕರೆ ನೀಡಿದರು.

ಪುಸ್ತಕಗಳನ್ನು ಹೆಚ್ಚಾಗಿ ಓದುವ ಹವ್ಯಾಸ ಮಾಡಿಕೊಂಡರೆ ಭಾಷಾ ಸ್ವಚ್ಛತೆ ಹಾಗೂ ಭಾಷೆಯ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಗುವುದು ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಜಿ ಕವಿತ ರವರು ಅಭಿಪ್ರಾಯಪಟ್ಟರು.

ಪ್ರಾಸ್ತವಿಕ ನುಡಿಯನ್ನು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ವಿಭಾಗದ ಮುಖ್ಯಸ್ಥರು ಮತ್ತು ಗ್ರಂಥಪಾಲಕರಾದ ಮಂಜುನಾಥ ಎಸ್ ರವರು ನಿರ್ವಹಿಸಿದರು ಕಾರ್ಯಕ್ರಮದಲ್ಲಿ ಶ್ರೀ ಹರ್ಷ ಎಂ.ಪಿ ಪತ್ರಾಂಕಿತ ವ್ಯವಸ್ಥಾಪಕರು, ಶ್ರೀ ಯೋಗೇಶ್ ಎಸ್., IQAC ಸಹ ಪ್ರಾಧ್ಯಾಪಕರು. ಮೋಹನ್ ಕುಮಾರ್ ಕೆ.ಎಸ್ ಹಾಗೂ ಕಾಲೇಜಿನ ಬೋಧಕ ವರ್ಗದವರು ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು

error: Content is protected !!