ಹಾಸನದಲ್ಲಿ ಶ್ರೀ ಬಸವೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮ

Like every year, this year too, a special Karthika month puja program was performed with devotion at the Sri Basaveshwara Temple located near Aralepet Road. The temple was decorated with flowers and electrical decorations.

ಹಾಸನ: ನಗರದ ಅರಳೇಪೇಟೆ ರಸ್ತೆ ಬಳಿ ಇರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮ ಭಕ್ತಿಪೂರ್ಣವಾಗಿ ನೆರವೇರಿಸಲಾಯಿತು. ದೇವಾಲಯವನ್ನು ಹೂವು ಹಾಗೂ ವಿದ್ಯುತ್ ಅಲಂಕಾರದಿಂದ ಸಿಂಗರಿಸಲಾಗಿತ್ತು.

ಶ್ರೀ ಬಸವಣ್ಣ ದೇವರಿಗೆ ವಿಶೇಷ ಪೂಜೆ, ಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಬಿ.ಪಿ.ಐಸಾಮಿಗೌಡ ಮಾತನಾಡಿ, ವೀರಶೈವ ಲಿಂಗಾಯತ ಸಂಘದ ವತಿಯಿಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜೆ ನೆರವೇರಿಸಲಾಗಿದೆ.

ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ ಎಂದರು. ಸಂಘದ ಪ್ರಧಾನ ಕಾರ್ಯದರ್ಶಿ ಈ.ಎಂ. ರುದ್ರಕುಮಾರ್, ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಸಂಘದ ಉಪಾಧ್ಯಕ್ಷ ಕಿರಣ್ ಕುಮಾರ್ ಹೊಸಮನಿ, ಸಹ ಕಾರ್ಯದರ್ಶಿ ಎಚ್. ಮಲ್ಲಿಕಾರ್ಜುನ್, ಜಂಟಿ ಕಾರ್ಯದರ್ಶಿ ಬಿ.ವಿ. ಲತೇಶ್, ನಿರ್ದೇಶಕರಾದ ಶೋಭನ್ ಬಾಬು ಮತ್ತು ಬಾಳ್ಳು ನಾಗೇಶ್, ಅಲೂರು ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಚಿಕ್ಕ ಕಣಗಾಲು ಅಜಿತ್, ಹಾಸನ ತಾಲ್ಲೂಕು ಘಟಕದ ನಿರ್ದೇಶಕ ಮಯೂರಿ ಲೋಕೇಶ್, ಸಾವಿತ್ರಿ ವಿಜಯಕುಮಾರ್, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಶೋಭಾ ಮಹೇಶ್, ನಿರ್ದೇಶಕರಾದ ಭಾಮೀನಿ ಮಂಜುನಾಥ್, ವೀಣಾ ದೇವರಾಜ್ ಸೇರಿ ಹಲವು ಮುಖಂಡರು ಪಾಲ್ಗೊಂಡಿದ್ದರು. ನಿವೃತ್ತ ಇಂಜಿನಿಯರ್ ಮಂಜುನಾಥ್, ನಾಗರಾಜ್ ಕೊಡ್ಲ್ಲಿಪೇಟೆ, ಕೀರ್ತಿಕುಮಾರ್ ಹಾಗೂ ಮಾಸ್ಟರ್ ಕೆ.ಎಸ್. ಜಗದೀಶ್ ಭಾಗವಹಿಸಿದ್ದರು.