ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ: ಎಫ್‌ಡಿಎ ಜ್ಯೋತಿಮೇರಿ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta officials raided the house of a first-class assistant of the Health Department this morning on charges of amassing assets beyond her income.

ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದಡಿ ಆರೋಗ್ಯ ಇಲಾಖೆ ಪ್ರಥಮ ದರ್ಜೆ ಸಹಾಯಕಿ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಫ್ ಡಿಎ ಜ್ಯೋತಿ ಮೇರಿ ಅವರ ಮನೆ ಹಾಗೂ ಅವರ ತಂಗಿಯ ನಿವಾಸದ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ಹಾಸನದ ಸತ್ಯಮಂಗಲ ಬಡಾವಣೆಯಲ್ಲಿರುವ ಜ್ಯೋತಿಮೇರಿ ಅವರ ಮನೆ, ಹಾಗೂ ಕುವೆಂಪು ನಗರದಲ್ಲಿರುವ ತಂಗಿಯ ನಿವಾಸಗಳಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಸ್ನೇಹ, ಡಿವೈಎಸ್‌ಪಿ ಸುರೇಶ್, ಇನ್ಸ್‌ಪೆಕ್ಟರ್ ಶಿಲ್ಪಾ ಮತ್ತು ಚಂದ್ರಶೇಖರ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಯಿತು.

ಬೆಳಗ್ಗೆ ಆರಂಭವಾದ ಶೋಧ ಕಾರ್ಯ ಇನ್ನೂ ಮುಂದುವರಿದಿದ್ದು, ಅಧಿಕಾರಿಗಳು ಮನೆ ಹಾಗೂ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.