14.2 C
Munich
Home News ಸಕಲೇಶಪುರ :ಸುಭಾಷ್ ಮೈದಾನ ಸಮಗ್ರ ಅಭಿವೃದ್ದಿಗೆ ಕ್ರಮ- ಶಾಸಕ ಸಿಮೆಂಟ್ ಮಂಜು

ಸಕಲೇಶಪುರ :ಸುಭಾಷ್ ಮೈದಾನ ಸಮಗ್ರ ಅಭಿವೃದ್ದಿಗೆ ಕ್ರಮ- ಶಾಸಕ ಸಿಮೆಂಟ್ ಮಂಜು

ಸಕಲೇಶಪುರ : ಪಟ್ಟಣದ ಸುಭಾಷ್ ಮೈದಾನವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಲು ಸಮಗ್ರ ಯೋಜನೆ ರೂಪಿಸುವಂತೆ ಶಾಸಕ ಸಿಮೆಂಟ್ ಮಂಜು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಟ್ಟಣದ ಸುಭಾಷ್ ಮೈದಾನಕ್ಕೆ ಭೇಟಿ ನೀಡಿ ಕ್ರೀಡಾಂಗಣವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿ, ಮೈದಾನವನ್ನು ಎಷ್ಟು ಸ್ವಚ್ಛಗೊಳಿಸಿದರೂ ಮತ್ತೆ ಹುಲ್ಲು ಬೆಳೆದು ದುಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಹವಾಮಾನ ಆರು ತಿಂಗಳು ಮಳೆ, ಆರು ತಿಂಗಳು ಬಿಸಿಲು ಕಂಡುಬರುವುದರಿಂದ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾದರೆ ಅತ್ಯಂತ ಅನುಕೂಲಕರ.

ಈ ನಿಟ್ಟಿನಲ್ಲಿ ಅಧಿಕಾರಿಗಳನ್ನು ಕರೆದು ಅಂದಾಜು ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ, ಅನುದಾನ ನೀಡುವಂತೆ ಮನವಿ ಮಾಡುತ್ತೇನೆ. ಸರ್ಕಾರ ಅನುದಾನ ನೀಡಿದರೆ ಶೀಘ್ರದಲ್ಲೇ ಒಳಾಂಗಣ ಕ್ರೀಡಾಂಗಣಗಳನ್ನು ನಿರ್ಮಿಸಿ, ಯುವಕರಿಗೆ ಮಳೆಗಾಲದಲ್ಲಿಯೂ ದೈಹಿಕ ಅಭ್ಯಾಸ ಮಾಡಲು ಅನುಕೂಲ ಕಲ್ಪಿಸಬಹುದು ಎಂದು ಹೇಳಿದರು. ಮೈದಾನದಲ್ಲಿ ಅಕ್ರಮವಾಗಿ ಕಸ ಹಾಕುತ್ತಿರುವುದು ಆಟ ಆಡಲು ಸಮಸ್ಯೆಯಾಗುತ್ತಿದೆ.

ಶೌಚಾಲಯ ಹಾಗೂ ವಿದ್ಯುತ್ ಸಂಪರ್ಕವನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಸ್ಥಳೀಯರು ಹಾಗೂ ಯುವಕರು ಸ್ವಚ್ಛತೆಗೆ ಆದ್ಯತೆ ನೀಡಿ, ಸ್ವಚ್ಛತಾ ಅಭಿಯಾನದಂತೆ ಕೈಜೋಡಿಸಿದರೆ ಮೈದಾನವನ್ನು ಸುಸ್ಥಿತಿಯಲ್ಲಿ ಉಳಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಪ್ರಸನ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

error: Content is protected !!