ಹಾಸನ: ಕತ್ತಲಾದರೂ ಬಾರದ ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕ ಸಿಮೆಂಟ್ ಮಂಜು

MLA Cement Manju immediately responded to the problem of students who were complaining about buses not arriving on time to go home near Shettyhalli Circle in Kattaya Hobli, Hassan district.

ಹಾಸನ: ಜಿಲ್ಲೆಯ ಕಟ್ಟಾಯ ಹೋಬಳಿ ಶೆಟ್ಟಿಹಳ್ಳಿ ವೃತ್ತದ ಬಳಿ ಮನೆಗೆ ತೆರಳಲು ಸೂಕ್ತ ಸಮಯಕ್ಕೆ ಬಸ್‌ಗಳು ಬಾರದೆ ಪರಿತಪಿಸುತ್ತಿದ್ದ ವಿದ್ಯಾರ್ಥಿಗಳ ಸಮಸ್ಯೆಗೆ ಶಾಸಕ ಸಿಮೆಂಟ್ ಮಂಜು ತಕ್ಷಣ ಸ್ಪಂದಿಸಿದರು.

ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆಬದಿಯಲ್ಲಿ ವಿದ್ಯಾರ್ಥಿಗಳು ನಿಂತಿರುವುದನ್ನು ಗಮನಿಸಿದ ಶಾಸಕ ಸಿಮೆಂಟ್ ಮಂಜು ತಮ್ಮ ವಾಹನದಿಂದ ಇಳಿದು ವಿದ್ಯಾರ್ಥಿಗಳ ಬಳಿ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿದರು. ಬಸ್‌ಗಳು ಸಮಯಕ್ಕೆ ಸರಿಯಾಗಿ ಸಂಚರಿಸದ ಕಾರಣ ವಿದ್ಯಾರ್ಥಿಗಳು ದಿನನಿತ್ಯ ತೊಂದರೆ ಅನುಭವಿಸುತ್ತಿರುವುದನ್ನು ವಿದ್ಯಾರ್ಥಿಗಳು ಶಾಸಕರಿಗೆ ವಿವರಿಸಿದರು.

ವಿದ್ಯಾರ್ಥಿಗಳ ಅಹವಾಲು ಆಲಿಸಿದ ಶಾಸಕರು ತಕ್ಷಣವೇ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ, ಸೋಮವಾರದಿಂದ ಶೆಟ್ಟಿಹಳ್ಳಿ ವೃತ್ತದಲ್ಲಿ ಒಬ್ಬ ಟಿಕೆಟ್ ಕಲೆಕ್ಟರ್ (ಟಿ.ಸಿ) ಅನ್ನು ನಿಯೋಜಿಸಿ, ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಶಾಸಕರ ತಕ್ಷಣದ ಸ್ಪಂದನೆ ಮತ್ತು ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆಯಿಂದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿದರು.

MLA Cement Manju immediately responded to the problem of students who were complaining about buses not arriving on time to go home near Shettyhalli Circle in Kattaya Hobli, Hassan district.