ಸಕಲೇಶಪುರ: ಶಾರ್ಟ್ ಸರ್ಕ್ಯೂಟ್ ನಿಂದ ಹಾನಿಗೀಡಾದ ಮನೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ಮಾಡಿ ವೈಯುಕ್ತಿಕ ಧನ ಸಹಾಯ ಮಾಡಿದರು.
ಪಟ್ಟಣದ ಅಗ್ರಹಾರ ಬಡಾವಣೆಯಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕವಾಗಿ ಬೆಂಕಿ ಭಾಗ್ಯ ಲಕ್ಷ್ಮಣ್ ಎಂಬುವರ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ಹಲವಾರು ವಸ್ತುಗಳು ಸುಟ್ಟು ಹೋಗಿದ್ದು ಈ ಹಿನ್ನೆಲೆಯಲ್ಲಿ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ಮಾಡಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
MLA Cement Manju visited the house damaged by a short circuit, inspected it, and provided personal financial assistance.










