1.4 C
Munich
Home News Politics ಸಿದ್ದರಾಮಯ್ಯ, ಸರ್ಕಾರವನ್ನು ಒಂದಿಂಚು ಅಲುಗಿಸಿದರೂ ರಾಜ್ಯದಲ್ಲಿ ರಕ್ತಕ್ರಾಂತಿ: ಕೇಂದ್ರ ಸರ್ಕಾರಕ್ಕೆ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಕೆ

ಸಿದ್ದರಾಮಯ್ಯ, ಸರ್ಕಾರವನ್ನು ಒಂದಿಂಚು ಅಲುಗಿಸಿದರೂ ರಾಜ್ಯದಲ್ಲಿ ರಕ್ತಕ್ರಾಂತಿ: ಕೇಂದ್ರ ಸರ್ಕಾರಕ್ಕೆ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಕೆ

ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ಧವೇ ಆಗುತ್ತೆ, ರಕ್ತ ಕ್ರಾಂತಿ ಆಗುತ್ತೆ| ಬಿಜೆಪಿಗೆಯವರಿಗೆ ಇದು ಎಚ್ಚರಿಕೆ

ಹಾಸನ: ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಸರ್ಕಾರವನ್ನು ಒಂದು ಇಂಚು ಅಲುಗಾಡಿಸಿದರೂ ರಕ್ತಕ್ರಾಂತಿ ಆಗುತ್ತದೆ ಎಂದು ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ತೆಗೆದುಕೊಂಡು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡುತ್ತಾರೆ ಎಂಬ ಗುಮಾನಿ ಹರಡಿದೆ.ಟಿವಿ ಮಾಧ್ಯಮಗಳಲ್ಲಿ ಬಂದಿದ್ದು ಬಹುಶಃ ನಿಜ ಆಗಬಹುದು. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇನೆ ಎಂದರು.

ಕೇಂದ್ರಕ್ಕೆ ಏನಾದರೂ ಆ ಆಲೋಚನೆ ಇದ್ದರೆ ವಾಪಾಸ್ ತೆಗೆದುಕೊಳ್ಳಬೇಕು. ಇಲ್ಲವಾದರೆ ರಕ್ತಕ್ರಾಂತಿ ಆಗುತ್ತೆ. ಬಿಜೆಪಿ ಸರ್ಕಾರ ಎರಡು ಬಾರಿಯೂ ಮುಂಬಾಗಿಲಿನಿಂದ ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲಿನಿಂದ ಅಧಿಕಾರ ಹಿಡಿದಿದೆ.

ಈ ಬಾರಿ ಪುನಃ ಇದೇ ಆಟವನ್ನು ಬಿಜೆಪಿಯವರು ಹೊರಟಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸತ್ಯಶೋಧನೆ ಸಮಿತಿ ಸಭೆ ನಡೆಸಿದ್ದೇವೆ. ಇಂದು ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದೇವೆ.

ಇದು ನಡೆದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ, ರಕ್ತ ಕ್ರಾಂತಿ ಆಗುತ್ತದೆ. ಇದಕ್ಕೆ ನಾವು ತಯಾರಾಗಿದ್ದೇವೆ, ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದರು.

ಅನಿವಾರ್ಯ ಘಟನೆ ನಡೆದರೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಯುದ್ಧಕ್ಕೆ ತಯಾರಾಗಬೇಕು. ಈ ರಾಜ್ಯದಲ್ಲಿ ಯುದ್ಧವನ್ನೇ ಮಾಡಬೇಕಾಗುತ್ತೆ. 136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ಧವೇ ಆಗುತ್ತೆ, ರಕ್ತ ಕ್ರಾಂತಿ ಆಗುತ್ತೆ. ಬಿಜೆಪಿಗೆಯವರಿಗೆ ಇದು ಎಚ್ಚರಿಕೆ ಎಂದರು.

ಎರಡು ಬಾರಿ ನಿಮ್ಮ ಆಟ ನೋಡಿದ್ದೇವೆ ಈ ಬಾರಿ ನಿಮ್ಮ ಆಟ ನಡೆಯಲ್ಲ. ಹಾಗೇನಾದರೂ ನೀವು ಅನಿವಾರ್ಯವಾಗಿ ಪ್ರಾಸಿಕ್ಯೂಷನ್‌ಗೆ ನೋಟೀಸ್ ಕೊಟ್ಟರೆ ಉಗ್ರಕ್ರಾಂತಿ ಆಗುತ್ತೆ ಎಂದರು.

error: Content is protected !!