ಉತ್ತರ ಕನ್ನಡ: ಶೈಕ್ಷಣಿಕ ಸಾಧನೆಯ ಜೊತೆಗೆ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಸದೃಢಗೊಳಿಸುವಲ್ಲಿ ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ. ಕ್ರೀಡಾ ಮನೋಭಾವವನ್ನು ಬೆಳೆಸುವುದರ ಜೊತೆಗೆ ಕ್ರೀಡಾ ಪಾಲನೆಯನ್ನು ಉತ್ತೇಜಿಸುತ್ತದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ದಾಂಡೇಲಿಯ ಡಿ.ಎಸ್.ಎಸ್.ಎ ಮೈದಾನದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೋಟ ಕ್ರೀಡಾ ಜ್ಯೋತಿ ಬೆಳಗಿ ಚಾಲನೆ ನೀಡಿದರು.
ತಾಲೂಕಿನ ಕಾಲೇಜುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಯತ್ನಮಾಡುತ್ತೇವೆ ಎಂದು ಹೇಳಿದರು.










