ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಾಲುವಾಗಿಲು ಗ್ರಾಮದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಸ್ವರೂಪ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿದರು.
ಗ್ರಾಮದಲ್ಲಿ 20 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರು ಬಳಿಕ ಅದೇ ಗ್ರಾಮದಲ್ಲಿ 5 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಅಲ್ಲಿನ ಪ್ರವಾಸಿ ತಾಣವಾದ ಹಾಲುವಾಗಿಲು ಕಟ್ಟೆಗೆ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಹಾಲುವಾಗಿಲು ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಶಾಸಕರ ಅನುದಾನದಲ್ಲಿ ನಿರ್ಮಾಣ ವಾಗುತ್ತಿರುವ ತೆರಿನಮನೆ ವೀಕ್ಷಿಸಿ ಗುಣಮಟ್ಟದ ಕಾಮಗಾರಿ ಮೂಲಕ ಅತೀ ಶೀಘ್ರವಾಗಿ ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಶಾಸಕರನ್ನು ಅಭೂತಪೂರ್ವಕವಾಗಿ ಬರಮಾಡಿಕೊಂಡು ಅವರನ್ನು ಸನ್ಮಾನಿಸಿ ಗೌರವಿಸಿದರು.










