ಹಾಸನ: ನಗರದ ರಿಂಗ್ ರಸ್ತೆಯಿಂದ ಸುಮಾರು 7 ಕಿಲೋಮೀಟರ್ ರಸ್ತೆ ಕಾಮಗಾರಿಗೆ ಶಾಸಕ ಸ್ವರೂಪ್ ಪ್ರಕಾಶ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯಿಂದ 2 ಕೋಟಿ 50 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಈ ಕಾಮಗಾರಿ ರಿಂಗ್ ರಸ್ತೆಯಿಂದ ಯಡಿಯೂರು, ಹೊನ್ನೇನಹಳ್ಳಿ, ಚಿಟ್ಟನಹಳ್ಳಿ, ನಿಡುಡಿ, ಚೀರನಹಳ್ಳಿ ಮಾರ್ಗವಾಗಿ ತಿಪಟೂರು-ಹಾಸನ ಸಂಪರ್ಕಿಸುವ ರಸ್ತೆ ಇದಾಗಿದ್ದು ಇಂದು ಗ್ರಾಮದ ಮುಖಂಡರು ಹಾಗೂ ಜೆಡಿಎಸ್ ಕಾರ್ಯಕರ್ತರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಗುಣಮಟ್ಟದ ಕಾಮಗಾರಿ ನಡೆಸಿ ಅತೀ ಶೀಘ್ರವಾಗಿ ಕಾಮಗಾರಿ ಮುಗಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದರು.










