ಹಾಸನ, ಏಪ್ರಿಲ್ 19: ಸಿಇಟಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯದ ಕಾರಣ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಿದ ಘಟನೆ ವಿವಾದಕ್ಕೆ ಬಗ್ಗೆ ಸಂಸದ ಶ್ರೇಯಸ್ ಪಟೇಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಜನಿವಾರ ತೆಗೆಯದ ಕಾರಣ ವಿದ್ಯಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡದಿರುವುದನ್ನು ನಾನು ಖಂಡಿತವಾಗಿ ವಿರೋಧಿಸುತ್ತೇನೆ. ಇಂತಹ ಕೃತ್ಯವನ್ನು ಮಾಡಬಾರದು,” ಎಂದರು.
“ನಾನು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಸಾರ್ವಜನಿಕನಾಗಿಯೂ ಹೇಳುತ್ತಿದ್ದೇನೆ, ಪ್ರತಿಯೊಬ್ಬರ ಆಚರಣೆಗಳು ಮತ್ತು ವೈಯಕ್ತಿಕ ನಂಬಿಕೆಗಳನ್ನು ಗೌರವಿಸಬೇಕು. ಜನಿವಾರ ತೆಗೆದು ಹೋಗಿ ಎನ್ನುವುದು ಯಾವುದೇ ರೀತಿಯಲ್ಲೂ ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ,” ಎಂದರು.
ಈ ಬಗ್ಗೆ ರಾಜ್ಯದ ಶಿಕ್ಷಣ ಸಚಿವರು ಸಹ ಪ್ರತಿಕ್ರಿಯಿಸಿದ್ದಾರೆ. ಸಂಬಂಧಿಸಿದವರಿಂದ ಪ್ರಕರಣದ ಬಗ್ಗೆ ವರದಿ ಕೇಳಿದ್ದಾರೆ ಅವರು ಈ ಸಂಬಂಧ ಕ್ರಮ ಕೈಗೊಳ್ಳಲಿದ್ದಾರೆ ಎಂದರು.










