14.2 C
Munich
Home News ಹಾಸನ: ರೈಲ್ವೆ ಕಾಮಗಾರಿಯಿಂದ ತೊಂದರೆ ಸ್ಥಳೀಯರಿಗೆ ಸಂಸದ ಶ್ರೇಯಸ್ ಪಟೇಲ್ ಭರವಸೆ

ಹಾಸನ: ರೈಲ್ವೆ ಕಾಮಗಾರಿಯಿಂದ ತೊಂದರೆ ಸ್ಥಳೀಯರಿಗೆ ಸಂಸದ ಶ್ರೇಯಸ್ ಪಟೇಲ್ ಭರವಸೆ

ಹಾಸನ: ನಗರದ ರಾಜಘಟ್ಟದಲ್ಲಿ ರೈಲ್ವೆ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ ಪರಿಶೀಲಿಸಿದರು.

ರಾಜಘಟ್ಟ, ಗವೇನಹಳ್ಳಿ ಸೇರಿದಂತೆ ಸುತ್ತಲಿನ ಬಡಾವಣೆಗಳಿಗೆ ಸಂಪರ್ಕಿಸುವ ರಸ್ತೆಗೆ ತೊಂದರೆ ಆಗುವ ರೀತಿಯಲ್ಲಿ ರೈಲ್ವೆ ಇಲಾಖೆ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿದ್ದರು.

ಈ ಹಿನ್ನೆಲೆಯಲ್ಲಿ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದ ಸಂಸದರು,ಈ ಬಗ್ಗೆ ಈಗಾಗಲೇ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ನಾಳೆಯೇ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ಹೇಳಿದರು.

ಸಾರ್ವಜನಿಕರಿಗೆ ತೊಂದರೆ ಆಗುವ ಯಾವುದೇ ಕೆಲಸವನ್ನು ಮುಂದುವರಿಸಲು ಬಿಡುವುದಿಲ್ಲ ಎಂದು ಭರವಸೆ ನೀಡಿದ ಶ್ರೇಯಸ್, ಸ್ಥಳೀಯರು ಆತಂಕಕ್ಕೆ ಒಳಗಾಗದೆ ನಿರ್ಭೀತಿಯಿಂದ ಇರುವಂತೆ ಧೈರ್ಯ ತುಂಬಿದರು.

error: Content is protected !!