31.6 C
Munich
Home News ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ಕೌಶಲ್ಯಗಳ ತರಬೇತಿ

ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ಕೌಶಲ್ಯಗಳ ತರಬೇತಿ

ಮೈಸೂರು, ಆ. 10: ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗವು ಐಕ್ಯೂಎಸಿ ಸಹಯೋಗದಲ್ಲಿ ವಿದ್ಯಾರ್ಥಿನಿಯರಿಗಾಗಿ ಮಹಿಳಾ ಸ್ವಯಂರಕ್ಷಣಾ ತರಬೇತಿ ಕಾರ್ಯಕ್ರಮ ಆಯೋಜಿಸಿತು.

ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲೀಲಾವತಿ ಎನ್.ಕೆ., ವಿದ್ಯಾರ್ಥಿಗಳು ಯಾವುದಾದರೂ ಒಂದು ಕ್ರೀಡೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಅಂತರರಾಷ್ಟ್ರೀಯ ಕರಾಟೆ ಕ್ರೀಡಾಪಟು ಹಾಗೂ ಅಂತರರಾಷ್ಟ್ರೀಯ ತೀರ್ಪುಗಾರರಾದ ಭಾರತಿ ಆನಂದ್ ಮತ್ತು ರಾಷ್ಟ್ರೀಯ ಕ್ರೀಡಾಪಟು ಹಾಗೂ ತೀರ್ಪುಗಾರರಾದ ಶ್ರೇಯಸ್ ಕುಮಾರ್ ಅವರು ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆಯ ವಿವಿಧ ಕೌಶಲ್ಯಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಪ್ರತಿಮಾ ಕೆ. ಮಾತನಾಡಿ, ಆತ್ಮರಕ್ಷಣಾ ತರಬೇತಿಯು ವಿದ್ಯಾರ್ಥಿನಿಯರಿಗೆ ಅತ್ಯಂತ ಉಪಯುಕ್ತವಾಗಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಹ ಸಂಚಾಲಕ ಡಾ. ಚೇತನ್ ಮಲಗಾವಿ, ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

error: Content is protected !!