ಹೊಳೆನರಸೀಪುರ: ಪುರಸಭೆಯಿಂದ ಪ್ಲಾಸ್ಟಿಕ್ ಬಳಸದಂತೆ ಜನ ಜಾಗೃತಿ

ಹೊಳೆನರಸೀಪುರ: ಪುರಸಭೆ ವತಿಯಿಂದ ಇಂದು ಸಮುದಾಯ ಸಂಘಟನಾಧಿಕಾರಿ ಪಂಕಜ, ಪರಿಸರ ಇಂಜಿನಿಯರ್ ರುಚಿ ದರ್ಶಿನಿ, ಆರೋಗ್ಯ ನಿರೀಕ್ಷಕ ವಸಂತ್ ಕುಮಾರ್, ಪುರಸಭೆ ಅಧ್ಯಕ್ಷ ಹೆಚ್.ಕೆ.ಪ್ರಸನ್ನ ಮತ್ತು ಪುರಸಭೆ ಮುಖ್ಯಾಧಿಕಾರಿ ಯು.ಎನ್.ಶಿವಶಂಕರ್ ಅವರ ಸೂಚನೆ ಮೇರೆಗೆ, ಪುರಸಭೆ ಸಿಬ್ಬಂದಿ ಮತ್ತು ಪೌರ ಕಾರ್ಮಿಕರೊಂದಿಗೆ ಪಟ್ಟಣದ ಕೋಟೆ ಮುಖ್ಯ ರಸ್ತೆ, ತರಕಾರಿ ಮಾರುಕಟ್ಟೆ, ಹೂವಿನ ಮಾರುಕಟ್ಟೆ, ಮತ್ತು ಹಲವಾರು ಅಂಗಡಿ, ಬೀದಿ ಬದಿ ವ್ಯಾಪಾರಸ್ಥರು, ಹೋಟೆಲ್‌ಗಳಿಗೆ ಭೇಟಿ ನೀಡಿ, ಕಡ್ಡಾಯವಾಗಿ ಪ್ಲಾಸ್ಟಿಕ್ ಕವರ್ ಬಳಸದಂತೆ, ಕಟ್ಟುನಿಟ್ಟಿನ ಸೂಚನೆ ನೀಡಿ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿ ಮಾಲೀಕರಿಂದ ಪ್ಲಾಸ್ಟಿಕ್ ಕವರ್ ವಶಪಡಿಸಿಕೊಂಡು ದಂಡ ವಿಧಿಸಿದರು.

ಅಂಗಡಿಗಳಿಗೆ ಮತ್ತು ಹೋಟೆಲ್‌ಗಳಿಗೆ ಭೇಟಿ ನೀಡಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಶೀಟ್ ಬಳಸದಂತೆ ಸೂಚನೆ ನೀಡಿ ಕಡ್ಡಾಯವಾಗಿ ಸ್ವಚ್ಛತೆ ಕಾಪಾಡುವುದರ ಜೊತೆಗೆ ವ್ಯಾಪಾರ ಪರವಾನಗಿ ಮಾಡಿಸಲು ಜಾಗೃತಿ ಮೂಡಿಸಿದರು.

ಇದೇ ಸಂದರ್ಭದಲ್ಲಿ ಪುರಸಭೆ ಅಕ್ಕ ಪಕ್ಕದಲ್ಲಿನ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ, ಪ್ಲಾಸ್ಟಿಕ್ ಕವರ್ ಬಳಸದಂತೆ ಸೂಚಿಸಿ ಪ್ಲಾಸ್ಟಿಕ್ ಕವರ್ ವಶಪಡಿಸಿಕೊಂಡು ದಂಡ ವಿಧಿಸಿದರು. ಪುರಸಭೆಯ ಸುನಿಲ್, ಕಿರಣ್, ಮಾದಯ್ಯ, ಸಂದೀಪ್, ಮಂಜು, ಗೃಹ ರಕ್ಷಕ ದಳದ ರಮೇಶ್ ಇದ್ದರು.