19.5 C
Munich
Home News ಉತ್ತರ ಭಾರತದಲ್ಲಿ ಭಾರೀ ಮಳೆ: ಟೊಮೆಟೊ ಬೆಲೆ ಎರಡು ಪಟ್ಟು ಹೆಚ್ಚಳ ಸಾಧ್ಯತೆ

ಉತ್ತರ ಭಾರತದಲ್ಲಿ ಭಾರೀ ಮಳೆ: ಟೊಮೆಟೊ ಬೆಲೆ ಎರಡು ಪಟ್ಟು ಹೆಚ್ಚಳ ಸಾಧ್ಯತೆ

ಕೋಲಾರ: ಬೆಲೆ ಏರಿಕೆಯ ಬಿಸಿಯಿಂದಾಗಿ ಜನರು ಮೊದಲೇ ರೋಸಿ ಹೋಗಿದ್ದಾರೆ.‌ ಈ‌ ಮಧ್ಯೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಹಬ್ಬಗಳಿಗೆ ಅನಿವಾರ್ಯವಾಗಿ ತರಕಾರಿಗಳನ್ನ ಖರೀದಿ ಮಾಡಲೇ ಬೇಕಾಗಿದೆ. ಈ ನಡುವೆ ಮಹಾರಾಷ್ಟ್ರ ಸೇರಿದಂತೆ ದೇಶದ ಉತ್ತರ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಮಳೆ ಹೀಗೆಯೇ ಮುಂದುವರೆದಿದ್ದೇ ಆದರೆ, ಟೊಮೆಟೊ ಬೆಲೆ ದ್ವಿಗುಣಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಏಷ್ಯಾದ ಎರಡನೇ ಅತಿದೊಡ್ಡ ಮಾರುಕಟ್ಟೆಯಾದ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ಒಂದು ಕ್ರೇಟ್ ಟೊಮೆಟೊ (15 ಕೆಜಿ) 750 ರೂ.ಗೆ ಮಾರಾಟವಾಗಿದೆ. ಮೂರು ದಿನಗಳ ಹಿಂದೆ ಬೆಲೆ ಪ್ರತಿ ಕ್ರೇಟ್‌ಗೆ 250-350 ರೂ.ಗಳಷ್ಟಿತ್ತು.

ಪರಿಸ್ಥಿತಿ ಇದೇ ರೀತಿ ಮುಂದುವರಿದರೆ, ಮುಂದಿನ ವಾರದ ವೇಳೆಗೆ, ಕರ್ನಾಟಕದಲ್ಲಿ ಟೊಮೆಟೊ ಚಿಲ್ಲರೆ ಬೆಲೆ ಕೆಜಿಗೆ 85 ರೂ.ಗೆ ತಲುಪುತ್ತದೆ ಎಂದು ಸಗಟು ವ್ಯಾಪಾರಿಗಳು ಭವಿಷ್ಯ ನುಡಿದಿದ್ದಾರೆ.

ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವುದರಿಂದ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಹರಿಯಾಣ ಮತ್ತು ತಮಿಳುನಾಡಿಗೆ ಪೂರೈಕೆಯಲ್ಲಿ ಪರಿಣಾಮ ಬೀರಿದೆ ಎಂದು ಎಪಿಎಂಸಿ ಮಾರುಕಟ್ಟೆಯ ಕಾರ್ಯದರ್ಶಿ ಕಿರಣ್ ಅವರು ಹೇಳಿದ್ದಾರೆ.

error: Content is protected !!