ಕೊಡಗು: ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವತಿಯರು ಸೇರಿ ಐವರು ಬಂಧನ

Police have arrested two young women and three young men for consuming marijuana in the Siddapur police station limits of Kodagu district.

ಕೊಡಗು: ಜಿಲ್ಲೆಯ ಸಿದ್ಧಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವತಿಯರು ಹಾಗೂ ಮೂರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ನೆಲ್ಲಿಹುದಿಕೇರಿ ಬೆಟ್ಟದಕಾಡು ಸಮೀಪದ ರಸ್ತೆಯಲ್ಲಿ ಆರೋಪಿಗಳು ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿದ್ದಾಪುರ ಪೊಲೀಸರು ಸ್ಥಳದಲ್ಲೇ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಅಪ್ಸಲ್ (29), ಭವಿತಾ (22), ಗಿರಿಜಾ (20), ಶಿವು (26) ಹಾಗೂ ನಿಖಿಲ್ (25) ಎಂದು ಗುರುತಿಸಲಾಗಿದೆ.

ಈ ಸಂಬಂಧ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಗಾಂಜಾ ಸೇರಿದಂತೆ ಮಾದಕ ವಸ್ತುಗಳ ವಿರುದ್ಧ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Police have arrested two young women and three young men for consuming marijuana in the Siddapur police station limits of Kodagu district.