ಹಾಸನ : ಸಹಕಾರ ಸಂಘಗಳಲ್ಲಿ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳಲ್ಲಿ ಶಿಸ್ತು ಪ್ರಾಮಾಣಿಕತೆ ಅತೀ ಮುಖ್ಯ ಎಂದು ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಪ್ರಕಾಶ್ ತಿಳಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಹಾಸನ ಜಿಲ್ಲಾ ಸಹಕಾರ ಒಕ್ಕೂಟ, ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಬೇಲೂರು ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಗೆ ಏರ್ಪಡಿಸಿದ್ದ ಒಂದು ದಿನದ ವಿಶೇಷ ತರಬೇತಿ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಯಾವುದೇ ಕೆಲಸವಾಗಲಿ ತರಬೇತಿಯಾಗಲಿ ಸಮಯಕ್ಕೆ ಸರಿಯಾಗಿ ಪಾಲ್ಗೊಂಡು ಮಾಹಿತಿಯನ್ನು ಪಡೆಯುವುದು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ತನ್ನದೇ ಆದಂತಹ ಬಂಡವಾಳವನ್ನು ಕ್ರೂಢಿಕರಿಸಿ ಅದರ ಮೂಲಕ ವ್ಯವಹಾರ ನಡೆಸಿ ಹೆಚ್ಚೆಚ್ಚು ಲಾಭ ಗಳಿಸುವಂತಾಗಬೇಕು ಎಂದರು.
ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಡಿ.ಪಿ. ಸೋಮೇಗೌಡ ಮಾತಾನಾಡಿ, ಜಿಲ್ಲಾ ಸಹಕಾರ ಒಕ್ಕೂಟವು ಹಮ್ಮಿಕೊಂಡಿರುವ ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದು ಉಪನ್ಯಾಸಕರು ನೀಡುವ ಉಪನ್ಯಾಸದ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶ ಸಿದ್ದೇಶ್, ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಡಿ.ಪಿ. ಸೋಮೇಗೌಡ. ನಿರ್ದೇಶಕರಾದ ಪ್ರವೀಣ್, ಸೋಮಣ್ಣ, ಬೇಲೂರಿನ ಸಹಕಾರ ಅಭಿವೃದ್ಧಿ ಅಧಿಕಾರಿ ಗುರುಮೂರ್ತಿ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಕ್ಷೇತ್ರ ವಿಸ್ತರಣಾಧಿಕಾರಿ ಹರೀಶ್, ಬೇಲೂರು ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳು ಸಿಇಓಗಳು ಉಪಸ್ಥಿತರಿದ್ದರು.
Prakash, President of Hassan District Cooperative Union, said that discipline and honesty are very important among the presidents, board members and staff of cooperative societies.










