ಭೂ ಕಬಳಿಕೆ ನಿಷೇಧ ಅಧಿನಿಯಮ : ಅರಿವು ಕಾರ್ಯಾಗಾರ

ಹಾಸನ : ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ, ಬೆಂಗಳೂರು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಅ.೭ ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿದೆ.
ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರು ಹಾಗೂ ನ್ಯಾಯಮೂರ್ತಿ ಬಿ.ಎ ಪಾಟೀಲ್ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.
ಜಿಲ್ಲಾಧಿಕಾರಿ ಸಿ ಸತ್ಯಭಾಮ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ತ್ಯಾಗರಾಜ ಎನ್ ಇನ್ನವಳ್ಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಆರ್ ಪೂರ್ಣಿಮಾ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.