19.5 C
Munich
Home News ಸಕಲೇಶಪುರದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಪಂಜಿನ ಮೆರವಣಿಗೆ: ನೂರಾರು ಜನರು ಭಾಗಿ

ಸಕಲೇಶಪುರದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಪಂಜಿನ ಮೆರವಣಿಗೆ: ನೂರಾರು ಜನರು ಭಾಗಿ

ಸಕಲೇಶಪುರ: ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ತಂದುಕೊಡುವ ನಿಟ್ಟಿನಲ್ಲಿಸಾವರ್ಕರಂತಹ ಕ್ರಾಂತಿಕಾರಿಗಳ ಪಾತ್ರವು ದೊಡ್ಡದಾಗಿದೆ ಎಂದು ಹಿಂದೂ ಹಿತ ರಕ್ಷಣಾ ಸಮಿತಿಯ ರಾಜ್ಯ ಮುಖಂಡ ರಘು ಸಕಲೇಶಪುರದಲ್ಲಿ ಹೇಳಿದರು.

ಪಟ್ಟಣದಲ್ಲಿ ಹಿಂದೂ ಹಿತ ರಕ್ಷಣಾ ವೇದಿಕೆ ವತಿಯಿಂದ ಹಳೆ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿಯವರು ಬರಬೇಕಾಗಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರದ ಒತ್ತಡದಿಂದ ಪುನೀತ್ ಕೆರೆಹಳ್ಳಿಯವರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿರುವುದು ಖಂಡನೀಯ ಎಂದು ಹೇಳಿದರು. ಆದರೂ ಸಹ ನೂರಾರು ಯುವಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದರು.

1947ರ ಆಗಸ್ಟ್ 14ರ ಮಧ್ಯರಾತ್ರಿ ದೇಶಕ್ಕೆ ಸ್ವಾತಂತ್ರ್ಯ ದೊರಕಿತು. ಆದರೆ ದೇಶ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ಎಂದು ಮೂರು ತುಂಡಾಯಿತು. ಆಗಸ್ಟ್ 14ರ ಮಧ್ಯರಾತ್ರಿ ದೇಶದ ಲಕ್ಷಾಂತರ ಹಿಂದೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯಿತು, ಲಕ್ಷಾಂತರ ಹಿಂದೂಗಳನ್ನು ಹತ್ಯೆ ಮಾಡಲಾಯಿತು. ಆದರೆ ಇಂತಹ ಕರಾಳ ರಾತ್ರಿಯನ್ನು ನಾವು ನೆನಪಿಸಿಕೊಳ್ಳುವ ಬದಲು ಪ್ರತಿವರ್ಷ ಆಗಸ್ಟ್ 15ರಂದು ಸಂಭ್ರಮಾಚರಣೆಯಲ್ಲಿ ಮುಳುಗುತ್ತೇವೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ದೇಶ ವಿಭಜನೆಯ ದುರಂತ ಕಥೆಯನ್ನು ಹೇಳಿಕೊಡಬೇಕು.

ದೇಶಕ್ಕೆ ಸ್ವಾತಂತ್ರ್ಯವನ್ನು ಯಾರು ತಂದುಕೊಟ್ಟರು ಎಂದರೆ ಗಾಂಧೀಜಿ ಹಾಗೂ ನೆಹರು ಎಂದು ಹೇಳಲಾಗುತ್ತದೆ. ಆದರೆ ಇವರಿಬ್ಬರಿಗಿಂತ ಶೇಕಡಾರು ಕ್ರಾಂತಿಕಾರರು ದೇಶಕ್ಕೆ ಸ್ವಾತಂತ್ರ್ಯ ತರಲು ಪ್ರಾಣವನ್ನೇ ಮುಡಿಪಾಗಿಟ್ಟಿದ್ದರು. ಅದಕ್ಕಾಗಿ ಮಕ್ಕಳಿಗೆ ನಾವು ನೈಜ ಇತಿಹಾಸವನ್ನು ತಿಳಿಸಬೇಕು. ದೇಶ ವಿಭಜನೆಯಾದರೆ ದೇಶದಲ್ಲಿರುವ ಎಲ್ಲಾ ಮುಸ್ಲಿಂರು ಪಾಕಿಸ್ತಾನಕ್ಕೆ ಹೋಗಬೇಕು, ಅಲ್ಲಿರುವ ಎಲ್ಲಾ ಹಿಂದೂಗಳು ಭಾರತಕ್ಕೆ ಬರಬೇಕು ಎಂದು ಸಂವಿಧಾನದ ಪಿತಾಮಹ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಆದರೆ ಅಂಬೇಡ್ಕರ್ ಅವರ ಮಾತಿಗೆ ಬೆಲೆ ಕೊಡದೆ ಜಾತ್ಯಾತೀತ ದೇಶವನ್ನಾಗಿ ಮಾಡಲಾಗಿದೆ.

ಇಂದಿಗೂ ದೇಶದಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳು, ಹಿಂದೂಗಳ ನಂಬಿಕೆಗಳ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಧರ್ಮಸ್ಥಳ ಹಿಂದೂಗಳ ಪವಿತ್ರ ಕ್ಷೇತ್ರವಾಗಿದ್ದು, ಆದರೂ ಸಹ ಅನಾಮಿಕ ಎಂಬ ವ್ಯಕ್ತಿಗೆ ಮುಖವಾಡ ಹಾಕಿಸಿ ಎಸ್‌.ಐ.ಟಿ ತಂಡ ರಚಿಸಿ ತನಿಖೆ ನಡೆಯುತ್ತಿದೆ. ಕೂಡಲೆ ಈ ಅನಾಮಿಕನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಧರ್ಮಸ್ಥಳ ವಿರುದ್ಧದ ಅಪಪ್ರಚಾರ ನಿಲ್ಲಿಸಬೇಕು.

error: Content is protected !!