26.4 C
Munich
Home News ನವದೆಹಲಿ:ಕೆಲವೇ ದಿನಗಳಲ್ಲಿ ಆರ್ಥಿಕ ಬಿರುಗಾಳಿ ಗ್ಯಾರಂಟಿ : ರಾಹುಲ್‌ ಗಾಂಧಿ ಎಚ್ಚರಿಕೆ

ನವದೆಹಲಿ:ಕೆಲವೇ ದಿನಗಳಲ್ಲಿ ಆರ್ಥಿಕ ಬಿರುಗಾಳಿ ಗ್ಯಾರಂಟಿ : ರಾಹುಲ್‌ ಗಾಂಧಿ ಎಚ್ಚರಿಕೆ

ಭಾರತದ ಆರ್ಥಿಕ ಪರಿಸ್ಥಿತಿ ಕುರಿತು ಎಚ್ಚರಿಕೆ ನೀಡುತ್ತಿರುವ ರಾಹುಲ್ ಗಾಂಧಿ
ಭಾರತವು ಹಿಂದೆಂದೂ ಕಾಣದ ದೊಡ್ಡ ಆರ್ಥಿಕ ಚಂಡಮಾರುತ ಎದುರಿಸುವ ಹಂತದಲ್ಲಿದೆ ಎಂದು ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ.

“ಇಷ್ಟು ವರ್ಷದಲ್ಲಿ ನಾವ್ಯಾರೂ ಕಂಡಿರದ ಆರ್ಥಿಕ ಆಘಾತವೊಂದು ಬರಲಿದೆ. ಇದು ಯುವಕರು, ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ,ಮೇ,25,2026(www.kannadapost.com): ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಭಾರತವು ಹಿಂದೆಂದೂ ಕಾಣದ ದೊಡ್ಡ “ಆರ್ಥಿಕ ಚಂಡಮಾರುತ” ಎದುರಿಸುವ ಹಂತದಲ್ಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಾವು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಕೇಂದ್ರ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ದೇಶಕ್ಕೆ ಕಷ್ಟದ ಪರಿಸ್ಥಿತಿ ಬಂದೊದಗಲಿದ್ದು, ಆರ್ಥಿಕ ಆಘಾತ ಎದುರಿಸಬೇಕು. ಇಷ್ಟು ವರ್ಷದಲ್ಲಿ ನಾವ್ಯಾರೂ ಕಂಡಿರದ ಆರ್ಥಿಕ ಆಘಾತವೊಂದು ಬರಲಿದೆ. ಇದನ್ನು ಯಾರೂ ತಡೆಯಲಾಗದು. ಇದು ಯುವಕರು, ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಉದ್ಯಮಿಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಆರ್ಥಿಕ ಆಘಾತದಿಂದ ಅದಾನಿ, ಅಂಬಾನಿ ಮುಂತಾದ ದೊಡ್ಡ ಉದ್ಯಮಿಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ. ಅವರಿಗೆ ನಾಲ್ಕೂ ದಿಕ್ಕುಗಳಿಂದ ರಕ್ಷಣಾ ಕೋಟೆಯಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜನರಿಗೆ ವಿದೇಶ ಪ್ರವಾಸ ಕಡಿಮೆ ಮಾಡುವಂತೆ ಹೇಳಿ, ತಾವೇ ಜಗತ್ತಿನಾದ್ಯಂತ ಪ್ರವಾಸ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದರು. “ಮೋದಿ ಅವರು ದೇಶದ ಜನರಿಗೆ ವಿದೇಶಿ ಪ್ರವಾಸಗಳನ್ನು ಕಡಿಮೆ ಮಾಡಲು ಬುದ್ಧಿವಾದ ಹೇಳುತ್ತಾರೆ, ಆದರೆ ಸ್ವತಃ ತಾವೇ ಜಗತ್ತಿನಾದ್ಯಂತ ಸದಾ ಸುತ್ತುತ್ತಿರುತ್ತಾರೆ” ಎಂದು ಅವರು ಹೇಳಿದ್ದಾರೆ.

ಜಾಗತಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂಧನ ಬೆಲೆ ಏರಿಕೆ ಮತ್ತು ಹಣದುಬ್ಬರ ತೀವ್ರಗೊಂಡಿದ್ದು, ಇದು ಆರ್ಥಿಕತೆಗೆ ದೊಡ್ಡ ಆಘಾತ ತರಲಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ಐದು ದಿನಗಳ ಅವಧಿಯಲ್ಲಿ ಕೇಂದ್ರ ಸರ್ಕಾರವು ಎರಡನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿರುವುದನ್ನು ಅವರು ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರೂಪಿಸಿರುವ ಆರ್ಥಿಕ ನೀತಿಗಳು ಸಂಪೂರ್ಣವಾಗಿ ಕುಸಿಯಲಿದ್ದು, ಅದರ ಪರಿಣಾಮವನ್ನು ಸಾಮಾನ್ಯ ನಾಗರಿಕರು ಅನುಭವಿಸಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ ಟೀಕೆಯ ಪ್ರಮುಖ ಅಂಶಗಳು:

  • ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿರುವ ಆರ್ಥಿಕ ನೀತಿಗಳು ಅದಾನಿ, ಅಂಬಾನಿಯಂಥವರಿಗೆ ಉಪಯೋಗವಾಗುವಂತಿವೆ.
  • ಸರ್ಕಾರ ರೂಪಿಸಿದ ಆರ್ಥಿಕ ರಚನೆಗಳು ಹೆಚ್ಚು ದಿನ ಉಳಿಯುವುದಿಲ್ಲ.
  • ಈ ಕುಸಿತವು ದೊಡ್ಡ ಉದ್ಯಮಿಗಳಿಗೆ ಪರಿಣಾಮ ಬೀರುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ.
  • ವಿದೇಶ ಪ್ರವಾಸ ಕಡಿಮೆ ಮಾಡಿ ಎಂದು ಜನಸಾಮಾನ್ಯರಿಗೆ ಹೇಳುವ ಪ್ರಧಾನಿ ತಾವೇ ದೇಶ ದೇಶ ಸುತ್ತುತ್ತಾರೆ ಎಂದು ಟೀಕಿಸಿದ್ದಾರೆ.
  • ಕೇಂದ್ರದ ಆರ್ಥಿಕ ನೀತಿಗಳು ಆಯ್ದ ಕೆಲವು ಕೋಟ್ಯಧಿಪತಿ ಉದ್ಯಮಿಗಳಿಗೆ ಮಾತ್ರ ಪ್ರಯೋಜನ ನೀಡುವಂತೆ ರೂಪಿಸಲ್ಪಟ್ಟಿವೆ ಎಂದು ಆರೋಪಿಸಿದ್ದಾರೆ.
error: Content is protected !!