ಚನ್ನರಾಯಪಟ್ಟಣ: ಬೆಂಗಳೂರಿನ ಗಾಂಧಿ ಭವನದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ವತಿಯಿಂದ ವಿಶ್ವಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಬೂಕ ಗ್ರಾಮದ ರಾಶಿಕ್ ಗೌಡ ಅವರಿಗೆ ಸಾಮಾಜಿಕ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇವರು ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಸಾಮಾಜಿಕ ಸೇವೆ ಮಾಡುವ ಮೂಲಕ ಶೋಷಿತರ ಬದುಕನ್ನು ಉತ್ತಮ ಪಡಿಸುವಲ್ಲಿ ಹಾಗೂ ಸೃಜನಶೀಲತೆಯನ್ನು ಪ್ರೇರೇಪಿಸುವಲ್ಲಿ ವಿಶೇಷ ಪಾಲ್ಗೊಳ್ಳುವಿಕೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಇವರಿಗೆ ನೀಡಲಾಗಿದೆ.
ರಾಷ್ಟ್ರೀಯ ಮಾನವ ಹಕ್ಕುಗಳ ತನಿಕಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಕೆ.ಸಂತೋಷ್, ಉಪಾಧ್ಯಕ್ಷ ಮಹಾದೇವ್, ಕಾನೂನು ಸಲಹೆಗಾರ ದೀಪಕ್, ಕರ್ನಾಟಕ ಹೈಕೋರ್ಟ್ನ್ ನಿವೃತ್ತ ನ್ಯಾಯಾಧೀಶ ಎಂ.ಎಸ್.ಶಂಕರಗುಳ್ಳಿ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಹಾಗೂ ಮುಂತಾದವರು ಹಾಜರಿದ್ದರು.
Rashik Gowda of Booka village in the taluk was honored with the Social Service Ratna Award at a program organized by the National Human Rights Commission at Gandhi Bhavan in Bengaluru on the occasion of International Human Rights Day.










