ಹಾಸನ: ಹೇಮಾವತಿ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರನ ಶವ ಇನ್ನೂ ಪತ್ತೆಯಾಗಿಲ್ಲ.
ಮೂರನೇ ದಿನವೂ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಅ.5 ರಂದು ಹೊಳೆನರಸೀಪುರ ಪಟ್ಟಣದಲ್ಲಿ ಹೇಮಾವತಿ ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಸತ್ತಾರ್ (79) ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ.
ನದಿಗೆ ಜಿಗಿಯುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿತ್ತು ಕುಂದಾಪುರದ ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯವರಿಂದ ಶೋಧ ಕಾರ್ಯ ಮುಂದುವರೆದಿದೆ. ಹೊಳೆನರಸೀಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








