ಸಕಲೇಶಪುರ :ತಾಲ್ಲೂಕು ಹಾನಬಾಳು ಹೋಬಳಿ ದೇವಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದ ಭೈರವೇಶ್ವರ ದೇವಾಲಯದ ಬಳಿ ನಿರ್ಮಾಣವಾಗುತ್ತಿರುವ ವೀಕ್ಷಣಾ ಗೋಪುರ (ವಾಚ್ ಟವರ್) ಕಾಮಗಾರಿ ಸ್ಥಳಕ್ಕೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸಕಲೇಶಪುರ ಆರ್.ಎಫ್.ಒ. ಹೇಮಂತ್ ಕುಮಾರ್, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.










