11.1 C
Munich
Home Uncategorized ಸಕಲೇಶಪುರ: ಶಾಸಕ ಸಿಮೆಂಟ್ ಮಂಜು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್: ಬಿಜೆಪಿಯಿಂದ ದೂರು

ಸಕಲೇಶಪುರ: ಶಾಸಕ ಸಿಮೆಂಟ್ ಮಂಜು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್: ಬಿಜೆಪಿಯಿಂದ ದೂರು

Sakleshpur: BJP leaders have filed a complaint with the Sakleshpur city police station demanding action against a person who made derogatory comments on social media against MLA Cement Manju.

ಸಕಲೇಶಪುರ: ಶಾಸಕ ಸಿಮೆಂಟ್ ಮಂಜು ವಿರುದ್ಧ ಸಾಮಾಜಿಕ‌‌ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಅವಹೇಳನಕಾರಿ ಕಾಮೆಂಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಸಕಲೇಶಪುರ ನಗರ ಠಾಣೆಗೆ ದೂರು ನೀಡಿದ್ದಾರೆ.

ಶನಿವಾರ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸೇವೆ ಸಮರ್ಪಣಾ ಸಮಾವೇಶದ ವೇದಿಕೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಷಣ ಮಾಡಿದ್ದರು.

ಅದನ್ನು ಫೇಸ್ ಬುಕ್ ಪೇಜ್ ಒಂದರಲ್ಲಿ ಲೈವ್ ಪ್ರಸಾರ ಮಾಡಲಾಗಿತ್ತು. ಆಗ ವಸಂತ್ ಕುಮಾರ್ ಎಂಬ ಖಾತೆಯಿಂದ ಶಾಸಕರ ವಿರುದ್ಧ ಅವಹೇಳನಕಾರಿ ಪದ ಬಳಸಿ ಕಾಮೆಂಟ್ ಹಾಕಲಾಗಿದೆ.

ಈ ಕಾಮೆಂಟ್ ನಿಂದ ಪಕ್ಷದ ಕಾರ್ಯಕರ್ತರು, ಕ್ಷೇತ್ರದ ಜತೆಗೆ ನೋವಾಗಿದ್ದು, ಸಿಮೆಂಟ್ ಮಂಜು ಅವರ ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ ಕಾಮೆಂಟ್ ಮಾಡಿದ ವ್ಯಕ್ತಿಯನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಠಾಣೆಗೆ ಬಾಳ್ಳುಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ. ಎಸ್. ಶಿವಕುಮಾರ್ ದೂರು ನೀಡಿದ್ದಾರೆ.

ಬೆಳಗೋಡು ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಮುಖಂಡರಾದ ನವೀನ್ ಶೆಟ್ಟಿ. ಕಿಟ್ಟಿ ಪುಟ್ಟರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

 

Sakleshpur: BJP leaders have filed a complaint with the Sakleshpur city police station demanding action against a person who made derogatory comments on social media against MLA Cement Manju.

error: Content is protected !!